ಅಪ್ಪನ ಗುಣ ಮಗನಿಗೆ ಬರುತ್ತಾ? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

ಮೈಸೂರು, ಜು. 29: ಅಪ್ಪನ ಗುಣ ಮಗನಿಗೆ ಬರುತ್ತಾ? ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಖಾರವಾಗಿ ತೀರುಗೇಟು ನೀಡುವ ಮೂಲಕ ವೈಯಕ್ತಿಕ ಪ್ರತಿಕ್ರಿಯೆ ನೀಡಿದೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ್ದ ಸಿದ್ದರಾಮಯ್ಯ, ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮಾ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದಿದ್ದರು.

ಇದಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, “ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿದೆ.

ಅಲ್ಲದೇ, ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು?ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? ಎಂದು ಪ್ರಶ್ನಿಸಿದೆ.

ಜೊತೆಗೆ ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಕುಟುವಾಗಿ ಟೀಕಿಸಿದೆ.

Exit mobile version