• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೋದಿಗೆ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ನೈತಿಕತೆ ಇದೆಯೇ? ಸಿದ್ದರಾಮಯ್ಯ

Reshma by Reshma
in ರಾಜಕೀಯ, ರಾಜ್ಯ
ಮೋದಿಗೆ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ನೈತಿಕತೆ ಇದೆಯೇ? ಸಿದ್ದರಾಮಯ್ಯ
0
SHARES
47
VIEWS
Share on FacebookShare on Twitter

Karnataka : ನಿರುದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ನಿರ್ಲಕ್ಷ್ಯದ ಮೂಲಕ ಯುವಜನರನ್ನು ವಿನಾಶದ ಅಂಚಿಗೆ ತಳ್ಳಿರುವ ಪ್ರಧಾನಿ ಮೋದಿ (Does Modi have morals)

ಅವರಿಗೆ ರಾಷ್ಟ್ರೀಯ ಯುವಜನೋತ್ಸವವನ್ನು (National Youth Day) ಉದ್ಘಾಟಿಸಲು ಯಾವ ನೈತಿಕತೆ ಇದೆ ಎನ್ನುವುದನ್ನು ಅವರೇ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

‘ಯುವವಿನಾಶೋತ್ಸವ’ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಅವರು, ವಿಶ್ವಬ್ಯಾಂಕ್ (World Bank) ಮಾನವಸಂಪನ್ಮೂಲ ಸೂಚ್ಯಂಕದಲ್ಲಿ ವಿಶ್ವದ 174 ದೇಶಗಳಲ್ಲಿ ಭಾರತದ ಸ್ಥಾನ 116 ಆಗಿದೆ.

ಇದು ನೇಪಾಳ ಮತ್ತು ಬಾಂಗ್ಲಾ ದೇಶಕ್ಕಿಂತಲೂ ನಿಕೃಷ್ಟವಾಗಿದೆ. ನಿರುದ್ಯೋಗ ನಿವಾರಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ಪ್ರಧಾನಿ ಮೋದಿ ಅವರು ಶಿಕ್ಷಣ ಕ್ಷೇತ್ರವನ್ನೂ ಕೂಡಾ ನಿರ್ಲಕ್ಷಿಸುತ್ತಾ ಬಂದಿದ್ದಾರೆ.

2014-15 ರಿಂದ 2022-23 ರ ವರೆಗಿನ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುವ ಅನುದಾನ ಶೇಕಡಾ 4.07 ರಿಂದ ಶೇಕಡಾ 2.64ಕ್ಕೆ ಇಳಿದಿದೆ.

tweets

2022ರ ಏಪ್ರಿಲ್ ಹೊತ್ತಿಗೆ ದೇಶದ ನಿರುದ್ಯೋಗದ ಪ್ರಮಾಣ ಶೇಕಡಾ 10.79ಕ್ಕೆ ಏರಿ ದಾಖಲೆ ನಿರ್ಮಿಸಿದೆ. ಕೇವಲ ನೋಟು ಅಮಾನ್ಯೀಕರಣದ ಮೂರ್ಖ ತೀರ್ಮಾನದಿಂದಾಗಿ 50 ಲಕ್ಷ(Does Modi have morals) ಜನ ಉದ್ಯೋಗ ಕಳೆದುಕೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ 62 ಲಕ್ಷ ಹುದ್ದೆಗಳು ಖಾಲಿ ಇವೆ. ಕೇವಲ ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿ ಇವೆ.

ಸನ್ಮಾನ್ಯ ಮೋದಿ ಅವರು 2004ರ ಲೋಕಸಭಾ ಚುನಾವಣೆಯ ವೇಳೆ ಪ್ರತಿವರ್ಷ 2 ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ 8 ವರ್ಷಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವುದು ದೂರವೇ ಉಳಿಯಿತು,

ಇದರ ಬದಲಿಗೆ 12.5 ಕೋಟಿ ಉದ್ಯೋಗಗಳನ್ನು ಕಿತ್ತುಕೊಂಡು ಅಸಹಾಯಕ ಜನರನ್ನು ಬೀದಿಗೆ ತಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, ರಾಜ್ಯದ ಬಿಜೆಪಿ (BJP) ಆಡಳಿತಕ್ಕೆ ಸನ್ಮಾನ್ಯ ಮೋದಿ ಅವರ ಎಂಟು ವರ್ಷಗಳ ಆಡಳಿತವೇ ಸ್ಪೂರ್ತಿ ಎನ್ನುವುದನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಆಗಾಗ ಭಜನೆ ಮಾಡುತ್ತಿರುತ್ತಾರೆ.

ಎರಡೂ ಆಡಳಿತವನ್ನು ಹೋಲಿಕೆ ಮಾಡಿದರೆ ಈ ಹೇಳಿಕೆ ಸತ್ಯವಾದುದೆಂದು ಮೇಲ್ನೋಟಕ್ಕೆ ಸಾಬೀತಾಗುತ್ತದೆ.

ಯುವಜನೋತ್ಸವ ಆಚರಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ರಾಜ್ಯದ ಅರ್ಧದಷ್ಟ ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನು ನೀಡಲು ಸಾಧ್ಯವಾಗಿಲ್ಲ.

ಒಂದರಿಂದ ಎಂಟನೆ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ ಸಿ ಪೂರ್ವ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ.

ಸೈಕಲ್ ನೀಡುವ ಯೋಜನೆಗೆ ಅನುದಾನ ನಿಲ್ಲಿಸಿರುವ ಕಾರಣದಿಂದಾಗಿ ಸೈಕಲ್ ಸೌಲಭ್ಯ ಇಲ್ಲದೆ ಗ್ರಾಮೀಣ ಶಾಲೆಗಳಲ್ಲಿನ ಸುಮಾರು 5 ಲಕ್ಷ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ ಕಂಡಿದೆ.

ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡದ (Schedule Tribe) ಯುವಜನರನ್ನು ವಿಶೇಷ ನೇಮಕಾತಿ ಯೋಜನೆ ಮೂಲಕ ಉದ್ಯೋಗ ನೀಡಲಾಗುವುದು ಎಂಬ ಬಿಜೆಪಿ ಸರ್ಕಾರದ ಭರವಸೆ ಹುಸಿಯಾಗಿ ಹೋಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ 4,600 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸುವ ಮೂಲಕ ಅದನ್ನೆ ನಂಬಿರುವ ಈ ಸಮುದಾಯದ ವಿದ್ಯಾರ್ಥಿಗಳು ಅರ್ಧದಲ್ಲಿಯೇ ತಮ್ಮ ಶಿಕ್ಷಣವನ್ನು ಮೊಟಕುಗೊಳಿಸುವಂತಾಗಿದೆ.

Anganwadi workers burst again

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 163 ಯುವಕರು ಕೋಮು ಗಲಭೆಗಳಲ್ಲಿ ಮೃತರಾಗಿದ್ದಾರೆ.

ಯುವಜನರಿಗೆ ಶಿಕ್ಷಣ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿ ರಾಷ್ಟ್ರನಿರ್ಮಾಣಕ್ಕೆ ಯುವಶಕ್ತಿಯನ್ನು ಬಳಸಬೇಕಾಗಿದ್ದ

ಸರ್ಕಾರ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ತಮ್ಮ ರಾಜಕೀಯ ಲಾಭಕ್ಕಾಗಿ ಕೋಮುವಾದಿ (Communalist) ಚಟುವಟಿಕೆಗಳಿಗೆ ಕಾಲಾಳುಗಳಾಗಿ ಬಳಸಿಕೊಳ್ಳಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 2022ರ ಸಿಎಜಿ ವರದಿ ಪ್ರಕಾರ 2022ರಲ್ಲಿ 1.62 ಲಕ್ಷ ವಿದ್ಯಾರ್ಥಿಗಳು ಶಾಲೆಗಳನ್ನು ತ್ಯಜಿಸಿದ್ದಾರೆ.

2020-21 ಮತ್ತು 2021-22ರ ಅವಧಿಯಲ್ಲಿ 1965 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು,

ಪಠ್ಯಪುಸ್ತಕ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಕೇಸರೀಕರಣಗೊಳಿಸಲು ಆದ್ಯತೆ ನೀಡುತ್ತಿದೆಯೇ ಹೊರತು ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ದಿಗೆ ಗಮನ ನೀಡುತ್ತಿಲ್ಲ.

ಕಳೆದ 3 ಬಜೆಟ್ ಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುವ ಅನುದಾನ ಶೇಕಡಾ 1.97ಕ್ಕಿಂತ ಮೇಲೆ ಏರಿಲ್ಲ.

ಕಾವೇರಿ ಮತ್ತು ಗಂಗೆಯಲ್ಲಿ ನೂರು ಬಾರಿ ಮುಳುಗಿ ಎದ್ದರೂ ನೊಂದ ಯುವ ಕನ್ನಡಿಗರ ಶಾಪದಿಂದ ಬಿಜೆಪಿ ನಾಯಕರಿಗೆ ಮುಕ್ತಿ ಸಿಗಲಾರದು ಎಂದು ಲೇವಡಿ ಮಾಡಿದ್ದಾರೆ.

ಅದೇ ರೀತಿ ಸಂವಿಧಾನ ಎಲ್ಲ ಭಾರತೀಯ ಭಾಷೆಗಳಿಗೆ ಮಾನ್ಯತೆ ನೀಡಿದ್ದರೂ ಐಬಿಪಿಎಸ್ (IBPS)ಪರೀಕ್ಷೆಗಳೂ ಸೇರಿದಂತೆ ಕೇಂದ್ರ ಸ್ವಾಮ್ಯದ ಯಾವ ಸಂಸ್ಥೆಗಳಲ್ಲಿಯೂ ಕನ್ನಡದಲ್ಲಿ ಪರೀಕ್ಷೆ ಬರೆಯುವಂತಿಲ್ಲ.

ಇದರಿಂದಾಗಿ ಸಾವಿರಾರು ಕನ್ನಡಿಗರು ಕನ್ನಡದ ನೆಲದಲ್ಲಿಯೇ ಉದ್ಯೋಗ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಬ್ಯಾಂಕಿಂಗ್ ಪರೀಕ್ಷೆಯನ್ನು ಕೂಡಾ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಬರೆಯಬೇಕಾಗಿರುವ ಕಾರಣ ಈ ಬ್ಯಾಂಕ್ ಗಳಲ್ಲಿ ಕೇವಲ ಶೇಕಡಾ 6ರಷ್ಟು ಮಾತ್ರ ಕನ್ನಡಿಗ ಉದ್ಯೋಗಿಗಳಿದ್ದಾರೆ.

ಕೇಂದ್ರ ಮತ್ತು ರಾಜ್ಯದ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಬಹಳ ಮುಖ್ಯವಾಗಿ ಕನ್ನಡಿಗ ಯುವಜನರಿಗೆ ಮಾಡಿರುವ ದ್ರೋಹವನ್ನು ಇತಿಹಾಸ ಮರೆಯದು.

ಪ್ರಾದೇಶಿಕ ಭಾಷೆಯಲ್ಲಿ ಕೇಂದ್ರ ನೇಮಕಾತಿ ಪರೀಕ್ಷೆಯನ್ನು ನಡೆಸಲು ನಿರಾಕರಿಸುವ ಮೂಲಕ ಕನ್ನಡಿಗ ಯುವಜನರನ್ನು ಹುಟ್ಟಿದ ನಾಡಿನಲ್ಲಿಯೇ ಅನಾಥರನ್ನಾಗಿ ಮಾಡಿದೆ ಎಂದು ಟ್ವೀಟ್‌(Tweet) ಮಾಡಿ ಟೀಕಿಸಿದ್ದಾರೆ.

Tags: politicalSiddaramaiahtweets

Related News

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.