ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ: ಸರ್ಕಾರಕ್ಕೆ ಹೈಕೋರ್ಟ್​ ಆದೇಶ

Bengaluru: ನಾಯಿ ಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ (Highcourt) ಆದೇಶ ಹೊರಡಿಸಿದ್ದು, ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾರ್ತಾ, ಪ್ರಚಾರ ಇಲಾಖೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೈಕೋರ್ಟ್​ ನಿರ್ದೇಶನ ನೀಡಿದೆ.

ವಕೀಲ ರಮೇಶ್ ಎಲ್ ನಾಯಕ್ (Ramesh L Nayak) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್‌ (Krishna S Dikshith) ಅವರಿದ್ದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. 4 ವಾರದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.

ಬೀದಿ ನಾಯಿಗಳಿಗೆ ಆಹಾರ ನೀಡಲು ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾರ್ತಾ, ಪ್ರಚಾರ ಇಲಾಖೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೇಳಿದೆ. ಈ ವೇಳೆ ಸರ್ಕಾರದ ಪರ ವಕೀಲರು 2023 ಅ.6 ರಂದು ನಡೆದ ಸಭೆಯಲ್ಲಿ ಸಂತ್ರಸ್ತರಿಗೆ ನೀಡುವ ಪರಿಹಾರ ವಿಚಾರವಾಗಿ ಚರ್ಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಇದಕ್ಕೆ ನ್ಯಾಯ ಪೀಠ ಸಭೆಯ ನಂತರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿತು. ಮಂಗಳವಾರ 14 ಮಂದಿ‌ ಮೇಲೆ ಬೀದಿ‌ ನಾಯಿಗಳು ದಾಳಿ ಮಾಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ (Doddaballapura) ನಗರದಲ್ಲಿ ಬೀದಿ‌ನಾಯಿಗಳ ಅಟ್ಟಹಾಸ ಮಿತಿ ಮೀರಿದೆ.

ನಗರದ ಟಿಬಿ ಸರ್ಕಲ್ (TB Circle), ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್‌ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು ಸೇರಿದಂತೆ ಪುರುಷರ ಮೇಲೆ ಬೀದಿ ನಾಯಿಗಳು ಎರಗಿದ್ದವು. ದೊಡ್ಡಬಳ್ಳಾಪುರ (Doddaballapura) ಜನರು ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದರು.

ಭವ್ಯಶ್ರೀ ಆರ್.ಜೆ

Exit mobile version