ನಾಳೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ಈ ರಸ್ತೆಗಳಲ್ಲಿ ಸಂಚರಿಸಬೇಡಿ!

ಬೆಂಗಳೂರು :  ನಾಳೆ(ಶುಕ್ರವಾರ) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ(Dont Go in these roads) ನಿಲ್ದಾಣದ ಟರ್ಮಿನಲ್ -2 ಉದ್ಘಾಟನೆ ಮತ್ತು ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ(Nadaprabhu Kempegowda) ಪ್ರತಿಮೆ ಅನಾವರಣಕ್ಕಾಗಿ,

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಬೆಂಗಾವಲು ಪಡೆ ಶುಕ್ರವಾರ ಹಾದುಹೋಗುವ ಕಾರಣ ವಾಹನ ಸಂಚಾರವನ್ನು ನಿಷೇಧಿಸುವ ರಸ್ತೆಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು(Bengaluru Traffic Police) ಬಿಡುಗಡೆ ಮಾಡಿದ್ದಾರೆ.‌

ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಮೀಪಿಸುವ ರಸ್ತೆಗಳ ಮೂಲಕ ಸಾಗಲಿದೆ. ಹೀಗಾಗಿ ಈ ರಸ್ತೆಗಳನ್ನು ಬಂದ್‌ ಮಾಡಲಾಗುತ್ತದೆ.

ಇದನ್ನೂ ಓದಿ : https://vijayatimes.com/chetan-over-hindu-controversy/

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿರುವ ಸಮಯಕ್ಕೆ ಈ ಕೆಳಗಿನ ಮಾರ್ಗಗಳಲ್ಲಿ ಸಂಚರಿಸದಂತೆ ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ. ಈ ಕುರಿತು ಬೆಂಗಳೂರು ಟ್ರಾಫಿಕ್‌ ಪೊಲೀಸರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ವಿವರ ಇಲ್ಲಿದೆ.

“11.11.2022 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು, ರಾಜಧಾನಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00 ರವರೆಗೆ ಮಾನ್ಯ ಪ್ರಧಾನ ಮಂತ್ರಿಗಳ ಸಂಚಾರ ಮತ್ತು ಅವರ ಭದ್ರತೆಗಾಗಿ, ಈ ಕೆಳಗಿನ ಮಾರ್ಗಗಳನ್ನು ನಿರ್ಬಂಧಿಸಲಾಗಿದೆ,” ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿಆರ್ ರವಿಕಾಂತೇಗೌಡ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಸಾರ್ವಜನಿಕರು ಈ ಕೆಳಗಿನ ರಸ್ತೆಗಳನ್ನು ಬಳಸದೆ ಸಂಚಾರ ಪೊಲೀಸರೊಂದಿಗೆ ಸಹಕರಿಸಲು ವಿನಂತಿಸಲಾಗಿದೆ” ಎಂದು ಹೇಳಿದ್ದಾರೆ.

https://youtu.be/-I-tDriCCcg ಕಾಪಾಡಿ ಕಂದಮ್ಮಗಳನ್ನ! Killer commission!

ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00ವರೆಗೆ ನಿರ್ಬಂಧಿಸಲಾಗಿರುವ ರಸ್ತೆಗಳು :

ಇನ್ನು ಪ್ರಧಾನಿ ಭೇಟಿ ವೇಳೆ ವಿಮಾನ ನಿಲ್ದಾಣದಲ್ಲಿ ಯಾವುದೇ ಕಾರ್ಯಚಟುವಟಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ವಿಮಾನ ನಿಲ್ದಾಣ ತಲುಪಬಹುದು. ನಿಮಾನ ನಿಲ್ದಾಣದಲ್ಲಿ ಯಾವುದೇ ನಿರ್ಬಂಧಗಳಿರುವುದಿಲ್ಲ ಎನ್ನಲಾಗಿದೆ.

Exit mobile version