Bengaluru: ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ಸಂಪುಟದ ಸಚಿವರಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ತನಿಖಾ ತಂಡ ತಮ್ಮ ಕೆಲಸ ಮಾಡುತ್ತಿದೆ ನೀವು ಇಲ್ಲಸಲ್ಲದ ಹೇಳಿಕೆಯ ನೀಡಿ ತನಿಖೆಯ ಜಾಡನ್ನು ಬದಲಿಸಬೇಡಿ ಎಂದಿದ್ದಾರೆ.

ಪೆನ್ಡ್ರೈವ್ ಪ್ರಕರಣದಲ್ಲಿ (Pendrive Case) ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ. ಇಲ್ಲವಾದರೆ ಪ್ರಕರಣ ಹಳ್ಳ ಹಿಡಿಯುತ್ತದೆ. ನಿಜ ಆರೋಪಿ ಅರೆಸ್ಟ್ ಆಗದೆ ಹೋಗಬಹುದು ಹಾಗಾಗಿ ಮಾತಿನ ಮೇಲೆ ನಿಗಾ ಇರಲಿ. ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (Special Investigation Team) ನಡೆಸುತ್ತಿದೆ. ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ.
ಇನ್ನು ನೂರಾರು ಮಹಿಳೆಯರ ಜೊತೆಗಿನ ರಾಸಲೀಲೆ ವಿಡಿಯೋಗಳಿದ್ದ ಪೆನ್ ಡ್ರೈವ್ ಬಹಿರಂಗಗೊಂಡ ನಂತರ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ (Passport) ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಸರ್ಕಾರ ಆದಷ್ಟು ಬೇಗ ಅಪರಾಧಿಗೆ ಶಿಕ್ಷೆ ವಿಧಿಸುವ ಕುರಿತು ವಿಶೇಷ ತನಿಖಾ ತಂಡಕ್ಕೆ ಕೂಡಾ ಸೂಚನೆ ನೀಡಿದೆ. ಹಾಗೂ ಮುಖ್ಯಮಂತ್ರಿಗಳ ಈ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D K Shivakumar) ಮತ್ತು ಸಚಿವರು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ತಿಳಿಸಿದ್ದಾರೆ.