ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ ಎಂದು ಡಿಸಿಎಂ (DCM)
ಚೀನಾದಿಂದ ರೇಷ್ಮೆ (Silk) ಆಮದು ಕಡಿಮೆಯಾಗಿದೆ. ನಿಮ್ಮ ಭೂಮಿಗೆ ಚಿನ್ನದ ಬೆಲೆಯಿದೆ
ಕ್ಷೇತ್ರದ ಎಲ್ಲಾ ಕೆರೆಗಳನ್ನು (Lakes) ತುಂಬಿಸಲು ಕ್ರಮ ಕೈಗೊಂಡಿದ್ದೇನೆ ಎಂದ ಡಿಕೆಶಿ (Dont sell lands DKS)
Ramnagar: ಮಾಡುವ ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM D.K. Shivakumar) ಅವರು ಹೇಳಿದ್ದಾರೆ ಕನಕಪುರ ತಾಲ್ಲೂಕಿನ (Kanakpur Taluk) ಭೂಹಳ್ಳಿ ಹೊಸಕೆರೆ (Bhuhalli Hosakere) ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ.
ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ, ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ (Development work) ಮೂಲಕ ಜನರ ಋಣ ತೀರಿಸಲಾಗುವುದು. ರೂ.250 ಕೋಟಿ ಮೊತ್ತದ ಕಾಮಗಾರಿಗಳು ನೀರಾವರಿ (Works Irrigation) ಇಲಾಖೆಯಿಂದಲೇ ನಡೆಯುತ್ತಿದೆ ಎಂದರು.

ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣಾ ಕೇಂದ್ರದ (Bhuhalli Forest Inspection Center) ವರೆಗೆ ಸುಮಾರು ರೂ.13 ಕೋಟಿ ವೆಚ್ಚದಲ್ಲಿ ರಸ್ತೆ, ದೊಡ್ಡಆಲಹಳ್ಳಿಯಿಂದ ಕಬ್ಬಾಳಿನ ತನಕ 40 ಕೋಟಿ ವೆಚ್ಚದಲ್ಲಿ ರೂ.14.5 ಕಿಮೀ ಉದ್ದದ ರಸ್ತೆ ಅಗಲೀಕರಣ (Road widening) ಮಾಡಲಾಗುತ್ತಿದೆ. ಇದರಿಂದ ನಮ್ಮ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ ಎಂದು ಹೇಳಿದರು.
ಇದನ್ನು ಓದಿ: ಭಗವಂತ ಭೂಮಿಗೆ ಬಂದ್ರು ಎರಡ್ಮೂರು ವರ್ಷದಲ್ಲಿ ಬೆಂಗಳೂರು ರಸ್ತೆಗಳ ಸರಿಪಡಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್
ಕನಕಪುರ (Kanakapura) , ಸಾತನೂರು (Sathanur) , ದೊಡ್ಡ ಆಲಹಳ್ಳಿ ರಸ್ತೆಗಳನ್ನು (Dodda Aladamara Road) ಅಗಲೀಕರಣ ಮಾಡಲು ಸಾಧ್ಯವಿಲ್ಲ ಎಂದು ಒಂದಷ್ಟು ಜನ ನಗುತ್ತಿದ್ದರು. ಆದರೆ ಇಂದು ಕೆಲಸವನ್ನು ಮಾಡಿ ತೋರಿಸಿದ್ದೇವೆ. ರಸ್ತೆ ಅಭಿವೃದ್ಧಿಗೆ (Road development) ಎಂದು ರೂ.135 ಕೋಟಿ, ಹೊಸಕೆರೆ ತುಂಬಿಸಲು ರೂ.108 ಕೋಟಿ ಖರ್ಚು ಮಾಡಲಾಗುತ್ತಿದೆ.
ನನ್ನ ಕ್ಷೇತ್ರದಲ್ಲಿ ಎಷ್ಟು ಕೆರೆಗಳನ್ನು ತುಂಬಿಸಲು ಸಾಧ್ಯವೋ ಅಷ್ಟು ಕೆರೆಗಳನ್ನು ತುಂಬಿಸುತ್ತೇನೆ. ಹಂತ ಹಂತವಾಗಿ ಕೆಲಸಗಳನ್ನು (Works) ಮಾಡುತ್ತೇನೆ. ಅಧಿಕಾರ ಅವಧಿಯಲ್ಲಿ ಎಲ್ಲಾ ಕಡೆ ನೀರು (Water) ತುಂಬಿ ಹರಿಯಬೇಕು. ಚನ್ನಪಟ್ಟಣ (Channapatna) , ರಾಮನಗರ (Ramanagara) , ಮಾಗಡಿಗೆ ಅನೇಕ ಕಾರ್ಯಕ್ರಮಗಳನ್ನು ನೀಡಲಾಗಿದೆ.
ಅಲ್ಲಿನ ಜನಕ್ಕೂ ನಾನು ಕೆಲಸ ಮಾಡಿಸುವುದಾಗಿ ಮಾತು ಕೊಟ್ಟಿದ್ದೇನೆ. ಮೇಕೆದಾಟು ಕಚೇರಿ ಪ್ರಾರಂಭ (Mekedatu office opened) ಮಾಡಲಾಗಿದ್ದು, ಎಷ್ಟು ಜಮೀನು ಮುಳುಗಡೆಯಾಗುತ್ತದೆ ಎಂದು ಅಂದಾಜು ಮಾಡಲು(Dont sell lands DKS) ಕಂದಾಯ ಹಾಗೂ ಅರಣ್ಯ ಅಧಿಕಾರಿಗಳು ಕೆಲಸ (Forest officers work) ಪ್ರಾರಂಭ ಮಾಡಿದ್ದಾರೆ. ಕಾವೇರಿ ನದಿಯಿಂದ ನೀರನ್ನು (Cauvery River) ತಂದು ಜನರ ಬದುಕನ್ನು ಬದಲಾವಣೆ ಮಾಡುವ ದೊಡ್ಡ ಕೆಲಸ ನಡೆಯುತ್ತಿದೆ ಎಂದರು.