New Delhi: ರಾಮಮಂದಿರ (Draupadi Murmu Invited-Rama Mandir) ಉದ್ಘಾಟನಾ ಮತ್ತು ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ (Trust) ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ.
ಉತ್ತರ ಪ್ರದೇಶದ ಅಯೋಧ್ಯೆ (Ayodhya)ಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಂದಿರ ಉದ್ಘಾಟನಾ ಸಮಾರಂಭಕ್ಕೆ ದೇಶದ ಅನೇಕ ಗಣ್ಯರು ಆಗಮಿಸಲಿದ್ದಾರೆ. ಇದೀಗ ರಾಷ್ಟ್ರಪತಿ ದ್ರೌಪತಿ ಮುರ್ಮು
ಅವರಿಗೆ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ (Alok Kumar)ಮತ್ತು ಆರ್ಎಸ್ಎಸ್ ಮುಖಂಡ
ರಾಮ್ ಲಾಲ್ (Ram Lal) ಅವರು ಅಧಿಕೃತ ಆಮಂತ್ರಣ (Draupadi Murmu Invited-Rama Mandir) ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ.
ಇದೇ ಜನವರಿ (January) 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭವ್ಯ ಕಾರ್ಯಕ್ರಮಕ್ಕೆ ಸುಮಾರು 3500 ವಿವಿಧ ಕ್ಷೇತ್ರಗಳ ಗಣ್ಯರು ಭಾಗಿಯಾಗಲಿದ್ದಾರೆ. ಪ್ರತಿಯೊಬ್ಬರನ್ನೂ ಖುದ್ದು ಭೇಟಿ ಮಾಡಿ
ಆಹ್ವಾನ ಪತ್ರಿಕೆಗಳನ್ನು ನೀಡಲಾಗುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್ ಹಾಗೂ ಅವುಗಳ ಸಂಯೋಜಿತ ಸಂಘಟನೆಗಳ ಮುಖ್ಯ
ಪ್ರತಿನಿಧಿಗಳು ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಮೂಲಗಳ ಪ್ರಕಾರ, ಈಗಾಗಲೇ ಎಲ್ಲ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಅದೇ ರೀತಿ ಥೈಲ್ಯಾಂಡ್, ಇಂಡೋನೇಷ್ಯಾ, ನೇಪಾಳ, ಶ್ರೀಲಂಕಾ, ಅಮೇರಿಕಾ ಸೇರಿದಂತೆ ವಿವಿಧ ದೇಶಗಳ ರಾಜತಾಂತ್ರಿಕ
ಪ್ರತಿನಿಧಿಗಳು ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್, ಚಿರಂಜೀವಿ (Rajinikanth, Chiranjeevi), ಮೋಹನ್ ಲಾಲ್, ಯಶ್, ಬಾಲಿವುಡ್ ನಟರಾದ
ಅಮಿತಾಬ್ ಬಚ್ಚನ್, ಶಾರುಖ್ ಖಾನ್, ಅಕ್ಷಯ್ ಕುಮಾರ್, ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ,
ರೋಹಿತ್ ಶರ್ಮಾ (Rohit Sharma), ಉದ್ಯಮಿಗಳಾದ ಮುಕೇಶ್ ಅಂಬಾನಿ, ಅದಾನಿ, ರತನ್ ಟಾಟಾ, ಆನಂದ್ ಮಹೀಂದ್ರಾ, ಆದಿತ್ಯಾ ಬಿರ್ಲಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಿಎಂ
ಎಚ್.ಡಿ ಕುಮಾರಸ್ವಾಮಿ, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಹುಜನ ಸಮಾಜವಾದಿ ಪಕ್ಷದ ಮಾಯಾವತಿ (Mayavathi) ಸೇರಿದಂತೆ ಅನೇಕ ರಾಜಕೀಯ
ಮುಖಂಡರು ಕೂಡಾ ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಆದರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ಸೋನಿಯಾ ಗಾಂಧಿ ಮತ್ತು ಅಧೀರ ರಂಜನ್ ಚೌಧರಿ ಅವರಿಗೆ ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ಪಕ್ಷ ತಿರಸ್ಕರಿಸಿದ್ದು,
ನಾವು ಕಾರ್ಯಕ್ರಮಕ್ಕೆ ಆಗಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಇದನ್ನು ಓದಿ: ಗುಂಡಿನ ದಾಳಿ: ಅಮೇರಿಕಾದ ಚಿಕಾಗೋದಲ್ಲಿ 2 ಮನೆಗಳ ಮೇಲೆ ಗುಂಡಿನ ದಾಳಿ, 8 ಮಂದಿ ಸಾವು