ಶಿವನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು

India

ಭಾರತದ(India) 15ನೇ ರಾಷ್ಟ್ರಪತಿಯಾಗಿ(President) ದ್ರೌಪದಿ ಮುರ್ಮು(Draupadi Murmu) ಅವರು ಆಯ್ಕೆಯಾದರು. ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಹೊರಹೊಮ್ಮಿದ್ದಾರೆ. ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಮತ್ತು ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಅವರು ಪಾತ್ರರಾಗಿದ್ದಾರೆ. “ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ” ಎಂದು ಹೇಳುವ ಮುಖೇನ ಪ್ರಮಾಣ ವಚನ ಸ್ವೀಕರಿಸಿದರು.

ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ ಮಾತನಾಡಿ, “ಸಂಸತ್ತಿನಲ್ಲಿ ನಿಂತಿರುವುದು — ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತ — ನಾನು ನಿಮಗೆಲ್ಲರಿಗೂ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಿಮ್ಮ ನಂಬಿಕೆ ಮತ್ತು ಬೆಂಬಲವು ಪ್ರಮುಖವಾಗಿರುತ್ತದೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನೀವು ನನಗೆ ಶಕ್ತಿ” ಎಂದು ಹೇಳಿದರು. ದ್ರೌಪದಿ ಮುರ್ಮು ಅವರ ಈ ಹೇಳಿಕೆಯ ಬೆನ್ನಲ್ಲೇ ಎಲ್ಲರಿಂದಲೂ ಭಾರಿ ಚಪ್ಪಾಳೆಗಳು ಹರಿದುಬಂದಿದೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಪ್ಪಾಳೆಗಳ ಸುರಿಮಳೆ ಪಡೆದುಕೊಂಡರು. ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ ರಮಣ(NV Ramana) ಅವರಿಗೆ ರಾಷ್ಟ್ರಪತಿ ಹುದ್ದೆಯ ಪ್ರಮಾಣ ವಚನ ಬೋಧಿಸಿದರು. ಜುಲೈ 21 ರಂದು, 64 ವರ್ಷ ವಯಸ್ಸಿನವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ಮೊದಲ ಬುಡಕಟ್ಟು ನಾಯಕರಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು ಹಾಗೂ ರಾಷ್ಟ್ರಪತಿ ಸ್ಥಾನ ಪಡೆದ ಕಿರಿಯ ವ್ಯಕ್ತಿಯಾಗಿದ್ದಾರೆ.

ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಹುದ್ದೆಗೇರಿದ ಎರಡನೇ ಮಹಿಳೆ ದ್ರೌಪದಿ ಮುರ್ಮು ಎಂಬುದು ಈಗ ಇತಿಹಾಸದ ಪುಟಕ್ಕೆ ಸೇರ್ಪಡೆಯಾಗಿದೆ.

Exit mobile version