ಬೆಂಗಳೂರು, ಡಿ. 24: ಡ್ರಗ್ಸ್ ಮಾಫಿಯಾ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಮೂವರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಡ್ರಗ್ಸ್ ಪೆಡ್ಲರ್ ಪೈಕಿ ಓರ್ವ ಆಫ್ರಿಕಾ ಪ್ರಜೆ ಸಹ ಇದ್ದಾನೆ. ಬಂಧಿತರಿಂದ ಡ್ರಗ್ಸ್ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.