ಬೆಂಗಳೂರು, ಜ. 21: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಡ್ರಗ್ಸ್ ಪ್ರಕರಣದ ಆರೋಪಕ್ಕೆ ಗುರಿಯಾಗಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಗೆ ಕಡೆಗೂ ಜಾಮೀನು ದೊರೆತಿದೆ.
ನಟಿ ರಾಗಿಣಿಗೆ ಡ್ರಗ್ಸ್ ಮಾಫಿಯ ಜೊತೆಗೆ ನಂಟಿದ್ದು, ಡ್ರಗ್ ಪೆಡ್ಲರ್ ಎಂಬ ಶಂಕೆ ಮೇರೆಗೆ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿಚಾರಣೆ ನಡೆಸಿದ ಹಿನ್ನೆಲೆಯಲ್ಲಿ ನಟಿ ರಾಗಿಣಿ, ಜೈಲು ಶಿಕ್ಷೆ ವಿಧಿಸಲಾಗಿತ್ತು.
ಈ ನಡುವೆ ಪರಪ್ಪನ ಅಗ್ರಹಾರ ಸೇರಿದ್ದ ರಾಗಿಣಿ ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದರು ಬೇಲ್ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ನಟಿ ರಾಗಿಣಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಎಫ್. ನಾರಿಮನ್ ನೇತೃತ್ವದ ಪೀಠ, ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಡ್ರಗ್ಸ್ ಸೇವನೆ ಹಾಗೂ ಪೂರೈಕೆ ಸಂಬಂಧ ಕಳೆದ 140 ದಿನದಿಂದ ಬಂಧನದಲ್ಲಿದ್ದ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ.