ಡ್ರಗ್ಸ್ ಪ್ರಕರಣ: ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ರಾಗಿಣಿ

ಬೆಂಗಳೂರು, ನ. 29: ಡ್ರಗ್ಸ್ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರು ಮೂರು ತಿಂಗಳಿನಿಂದ ಜಾಮೀನಿಗಾಗಿ ಅನೇಕ ಪ್ರಯತ್ನಗಳನ್ನು ಮಾಡಿದ್ದು, ಅದೆಲ್ಲ ವಿಫಲವಾದ ಹಿನ್ನಲೆಯಲ್ಲಿ ಇದೀಗ ರಾಗಿಣಿ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಭಂಧಿಸಿದಂತೆ ಸೆಪ್ಟೆಂಬರ್ನಲ್ಲಿ ಪರಪ್ಪನ ಅಗ್ರಹರಾ ಜೈಲು ಸೇರಿದ್ದ ರಾಗಿಣಿಗೆ ನವೆಂಬರ್ 3ರಂದು ಹೈಕೋರ್ಟ್ ಜಾಮೀನು ನಿರಾಕರಿಸಿ, ಸಧ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಆ ಕುರಿತ ಅರ್ಜಿ ವಿಚಾರಣೆ ಡಿಸೆಂಬರ್ 4ರಂದು ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ಇನ್ನೊಬ್ಬ ನಟಿ ಸಂಜನಾ ಕೂಡ ತಮಗೆ ಜಾಮೀನು ನೀಡುವಂತೆ ಮತ್ತೊಮ್ಮೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

Exit mobile version