• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ದೃಶ್ಯ 2′ ಚಿತ್ರೀಕರಣ ಆರಂಭ

Sharadhi by Sharadhi
in ಮನರಂಜನೆ
ದೃಶ್ಯ 2′ ಚಿತ್ರೀಕರಣ ಆರಂಭ
0
SHARES
0
VIEWS
Share on FacebookShare on Twitter

ಪಿ.ವಾಸು ನಿರ್ದೇಶನದ ದೃಶ್ಯ 2 ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್. ವಿ – ಅನಂತನಾಗ್ ಅಭಿನಯ..

2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ “ದೃಶ್ಯ”. ಈಗ ಇದೇ ಚಿತ್ರದ ಮುಂದುವರೆದ ಭಾಗ ” ದೃಶ್ಯ ೨” ಎಂಬ ಹೆಸರಿನಿಂದ ನಿರ್ಮಾಣವಾಗುತ್ತಿದೆ.

“ದೃಶ್ಯ ೨” ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.
ಈಗ ನಿರ್ದೇಶಕ ಪಿ.ವಾಸು ಅವರ ಸಾರಥ್ಯದಲ್ಲಿ ಕನ್ನಡದಲ್ಲೂ ಚಿತ್ರೀಕರಣ ಆರಂಭವಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್. ವಿ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಹಿರಿಯನಟ ಅನಂತನಾಗ್ ಚಿತ್ರತಂಡ ಸೇರಿಕೊಂಡಿದ್ದಾರೆ.

ಈ ಚಿತ್ರದ ಮುಹೂರ್ತ ಸಮಾರಂಭ ಯಲಹಂಕದ ಬಳಿಯ ವೈಟ್ ಹೌಸ್ ನಲ್ಲಿ ಸರಳವಾಗಿ ನೆರವೇರಿತು. ರವಿಚಂದ್ರನ್.ವಿ, ಅನಂತನಾಗ್, ಪಿ.ವಾಸು ಅವರು ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇಂದಿನಿಂದಲೇ ಚಿತ್ರೀಕರಣ ನಿರಂತರವಾಗಿ ನಡೆಯಲಿದೆ. “ದೃಶ್ಯ ೨” ಚಿತ್ರತಂಡ ಸೇರಿಕೊಂಡಿರುವುದಕ್ಕೆ ನಟ ಅನಂತನಾಗ್ ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಕಳೆದ ಒಂದುವರೆ ವರ್ಷದಿಂದ ಮನೆಬಿಟ್ಟು ಆಚೆ ಬಂದಿಲ್ಲ. ಬಹಳ ದಿನಗಳ ನಂತರ ಆಚೆ ಬಂದಿರುವುದು ನನಗೆ ಖುಷಿಯಾಗಿದೆ. ಎಲ್ಲರೂ ಲಾಕ್ ಡೌನ್ ಸಮಯದಲ್ಲಿ ದಪ್ಪ ಆಗುತ್ತಾರೆ. ನಾನು ನಾಲ್ಕು ಕೆಜಿ ಕಡಿಮೆಯಾಗಿದ್ದೇನೆ ಎಂದರು.

ನನಗೆ ಕಥೆ ಇಷ್ಟವಾಗಿ, ಕೇವಲ ನಾಲ್ಕೈದು ದಿನಗಳಲ್ಲಿ ಈ ಚಿತ್ರದಲ್ಲಿ ನಾನು ಅಭಿನಯಿಸುವುದು ಖಚಿತವಾಯಿತು. ಸ್ವಲ್ಪ ಸಮಯದಲ್ಲಿ ಚಿತ್ರತಂಡ ಎಲ್ಲಾ ಸಿದ್ದತೆ ಮಾಡಿಕೊಂಡಿರುವುದು ಸಂತಸದ ವಿಷಯ. ಪಿ.ವಾಸು ಅವರ ನಿರ್ದೇಶನದಲ್ಲಿ ನಾನು ನಟಿಸುತ್ತಿರುವ ಎರಡನೇ ಚಿತ್ರವಿದು ಎನ್ನುತ್ತಾರೆ ಅನಂತನಾಗ್.

“ದೃಶ್ಯ” ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ, ನವ್ಯ ನಾಯರ್ ಈ ಚಿತ್ರದಲ್ಲೂ ನಾಯಕಿಯಾಗಿ ನಟಿಸುತ್ತಿದ್ದಾರೆ. ರವಿಚಂದ್ರನ್ ಅವರ ಪುತ್ರಿ ಪಾತ್ರದಲ್ಲಿ ಆರೋಹಿ ನಾರಾಯಣ್ ಕಾಣಿಸಿಕೊಳ್ಳುತ್ತಿದ್ದಾರೆ.
ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

E4 Entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸಿ.ವಿ.ಸಾರಥಿ. ಜೀತು ಜೋಸೆಫ್ ಕಥೆ ಬರೆದಿದ್ದು, ಪಿ.ವಾಸು ನಿರ್ದೇಶನ ಮಾಡುತ್ತಿದ್ದಾರೆ. ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ , ರವಿ ಸಂತೆಹುಕ್ಲು ಅವರ ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ , ಭರತ್ ಅವರ ನಿರ್ಮಾಣ ನಿರ್ವಹಣೆ “ದೃಶ್ಯ 2” ಚಿತ್ರಕ್ಕಿದೆ‌.

Related News

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 7, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.