ಗುವಾಹಟಿ, ಫೆ. 11: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಂದು ಮತ್ತು ಎರಡನೇ ಶ್ರೇಣಿಯ ಅಧಿಕಾರಿಗಳಾಗಿ ಕ್ರೀಡಾಪಟುಗಳನ್ನು ನೇಮಕ ಮಾಡಲು ರಾಜ್ಯದ ಸಮಗ್ರ ಕ್ರೀಡಾ ನೀತಿಗೆ ಸಂಪುಟ ತಿದ್ದುಪಡಿ ಮಾಡಿದೆ. ಭಾರತದ ಸ್ಟಾರ್ ಓಟಗಾರ್ತಿ ಹಿಮಾದಾಸ್ ಅವರಿಗೆ ರಾಜ್ಯದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಹುದ್ದೆಯನ್ನು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನಾವಾಲ್ ಘೋಷಿಸಿದ್ದಾರೆ.
ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ವಿಶ್ವ ಚಾಂಪಿಯನ್ಶಿಪ್ ಪದಕ ವಿಜೇತರಿಗೆ ವಿವಿಧ ಹುದ್ದೆಗಳನ್ನು ನೀಡಲಾಗುತ್ತಿದ್ದು, ಸ್ಪ್ರಿಂಟರ್ ಹಿಮಾ ದಾಸ್ರನ್ನು ಡಿಎಸ್ಪಿಯಾಗಿ ನೇಮಕ ಮಾಡಲು ಸಂಪುಟ ಸಚಿವರು ಅನುಮೋದನೆ ನೀಡಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು, ಸ್ಪ್ರಿಂಟರ್ ಕ್ವೀನ್ ಹಿಮಾ ದಾಸ್ಗೆ ಡಿಎಸ್ಪಿ ಹುದ್ದೆ ನೀಡುವ ಸಂಪುಟದ ಈ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.