ನವದೆಹಲಿ, ಡಿ. 15: 2021ರಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮುಖ್ಯ ಅಥಿಯಾಗಿ ಭಾಗವಹಿಸಲಿದ್ದಾರೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೋಮಿನಿಕ್ ರಾಬ್ ತಿಳಿಸಿದ್ದಾರೆ.
2021ರಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕು ಎಂಬ ಭಾರತದ ಆಹ್ವಾನವನ್ನು ಬೋರಿಸ್ ಜಾನ್ಸ್ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.
ಮುಂದಿನ ವರ್ಷ ಬ್ರಿಟನ್ ಆಯೋಜಿಸಿರುವ ಜಿ-7 ಶೃಂಗದ ಜತೆ ಕೈಜೋಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೋರಿಸ್ ಜಾನ್ಸನ್ ಆಹ್ವಾನಿಸಿದ್ದಾರೆ. ಅಲ್ಲದೇ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಹ್ವಾನವನ್ನು ಬೋರಿಸ್ ಸ್ವೀಕರಿಸಿದ್ದಾರೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೋಮಿನಿಕ್ ರಾಬ್ ತಿಳಿಸಿದ್ದಾರೆ.
ಉಭಯ ದೇಶಗಳ ನಡುವೆ ಅಗತ್ಯವಿರುವ ದ್ವಿಪಕ್ಷೀಯ ಸಂಬಂಧದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಬ್ ಹಾಗೂ ಜೈ ಶಂಕರ್ ಜಂಟಿಯಾಗಿ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.