Visit Channel

ಪಾಕಿಸ್ತಾನದ ಕ್ವೆಟ್ಟಾ ಜಿಲ್ಲೆಯಲ್ಲಿ ಪ್ರಬಲ ಭೂಕಂಪ, 20 ಮಂದಿ ಮೃತ

ಇಸ್ಲಾಮಾಬಾದ್ ಅ 7 : ಪಾಕಿಸ್ತಾನದ ದಕ್ಷಿಣ ಭಾಗದ ಕ್ವೆಟ್ಟಾ ಜಿಲ್ಲೆಯ ಹರ್ನಾಯ್ ಪ್ರದೇಶದಲ್ಲಿ ಗುರುವಾರ ನಸುಕಿನಲ್ಲಿ ಸಂಭವಿಸಿದ ಭಾರಿ ಭೂಕಂಪನದಲ್ಲಿ ಸುಮಾರು 20 ಮಂದಿ ಮೃತಪಟ್ಟಿದ್ದು ಜೊತೆಗೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ದುರ್ಘಟನೆಯು ಪಾಕಿಸ್ತಾನದ ಕ್ವೆಟ್ಟಾ ಜಿಲ್ಲೆಯ ಹರ್ನಾಯ್ ಪ್ರದೇಶದಲ್ಲಿ ಇಂದು ಮುಂಜಾನೆ ಉಂಟಾಗಿದೆ. ಭೂಕಂಪನದ ತೀವ್ರತೆಗೆ ಮನೆಯ ಚಾವಣಿ, ಗೋಡೆ ಕುಸಿದು ಬಿದ್ದ ಕಾರಣದಿಂದ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ರಿಕ್ಷರ್‌ ಮಾಪಕದಲ್ಲಿ  5.7 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ 200ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಈ ಪ್ರಬಲ ಭೂಕಂಪನದಿಂದ 20 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಬಲುಚಿಸ್ತಾನ ಗೃಹ ಸಚಿವ ಮಿರ್ ಜಿಯಾ ಉಲ್ಲಾ ಲಂಗೌ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪ್ರಾಂತೀಯ ಅಧಿಕಾರಿ ಸುಹೈಲ್ ಅನ್ವರ್ ಇದರಲ್ಲಿ  ಒಬ್ಬ ಮಹಿಳೆ ಮತ್ತು ಆರು ಮಂದಿ ಮಕ್ಕಳು ಸೇರಿದ್ದಾರೆ ಹಾಗೂ 200ಕ್ಕ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಭೂಕಂಪನವು ರಿಕ್ಟರ್ ಮಾಪನದಲ್ಲಿ 5.7 ತೀವ್ರತೆ ಹೊಂದಿದೆ. ಬೆಳಿಗ್ಗೆ 3 ಗಂಟೆ ಸುಮಾರಿಗೆ ಸುಮಾರು 20 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿಯೂ ಭೂಮಿ ನಡುಗಿದ ಅನುಭವವಾಗಿದೆ.ಎಂದು ತಿಳಿದು ಬಂದಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.