ವಿಚಾರಣೆ ಮುಂದೂಡುವಂತೆ ಸೋನಿಯಾ ಗಾಂಧಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಇ.ಡಿ ; ವಿಚಾರಣೆ ಮುಂದೂಡಿಕೆ

Sonia Gandhi

ನ್ಯಾಷನಲ್ ಹೆರಾಲ್ಡ್(National Herald Case) ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ(ED) ಕಾಂಗ್ರೆಸ್ ಅಧಿನಾಯಕಿ(Congress President) ಸೋನಿಯಾ ಗಾಂಧಿ(Sonia Gandhi) ಅವರಿಗೆ ಸಮನ್ಸ್(Summons) ಜಾರಿ ಮಾಡಿತ್ತು. ಆದ್ರೆ, ಅನಾರೋಗ್ಯದ ಹಿನ್ನೆಲೆ ಸಮನ್ಸ್ ಮುಂದೂಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಲಿಖಿತ ಮನವಿಯನ್ನು ಜಾರಿ ನಿರ್ದೇಶನಾಲಯಕ್ಕೆ ರವಾನಿಸಿದ್ದರು.

ಈ ಮನವಿ ಪತ್ರವನ್ನು ಇ.ಡಿ ಬುಧವಾರ ಸ್ವೀಕರಿಸಿದೆ. ಲಿಖಿತ ಪತ್ರದ ಮೂಲಕ ಮಾಡಿಕೊಂಡಿರುವ ಮನವಿಯನ್ನು ಇ.ಡಿ ಸ್ಪಂದಿಸಿ, ವಿಚಾರಣೆಗೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಈ ಹಿಂದೆ ಸೋನಿಯಾ ಗಾಂಧಿ ಜೂನ್ 07 ರಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ, ಸೋನಿಯಾ ಗಾಂಧಿ ಅವರು ಕೋವಿಡ್ -19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ಇ.ಡಿ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿತ್ತು.

“ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾದ ನಂತರ ವೈದ್ಯರು ಮನೆಯಲ್ಲಿ ವಿಶ್ರಾಂತಿ ಪಡೆಯಲು ಕಟ್ಟುನಿಟ್ಟಾಗಿ ಸಲಹೆ ನೀಡಲಾಗಿರುವುದರಿಂದ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಇ.ಡಿಗೆ ಪತ್ರ ಬರೆದಿದ್ದಾರೆ, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ವಿಚಾರಣೆಗೆ ಹಾಜರಾಗುವುದನ್ನು ಮುಂದೂಡಬೇಕು” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಸೋಮವಾರ ಸಂಜೆ ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಕಾಂಗ್ರೆಸ್ ಅಧ್ಯಕ್ಷರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

Exit mobile version