ರಾಹುಲ್ ಗಾಂಧಿಗೆ ಇ.ಡಿ ವಿಚಾರಣೆ ಅಂತ್ಯ ; ರಾಹುಲ್ ಸಂದೇಶಕ್ಕಾಗಿ ಕಾಯುತ್ತಿರುವ ‘ಕೈ’ ನಾಯಕರು!

ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಅವರನ್ನು ಇಡಿ(ED) ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು(Congress Workers) ಬೀದಿಗಿಳಿದು, ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಇದೇ ಅನುಕ್ರಮದಲ್ಲಿ ಮಂಗಳವಾರ ಕೋಟಾದ ಜಿಲ್ಲಾಧಿಕಾರಿ(District Collector) ಕಚೇರಿ ಬಳಿ ರಾಹುಲ್ ಗಾಂಧಿ ಬಂಧನವಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿ ಬಂಧನವನ್ನು ಕೋಟಾದ ಕಾಂಗ್ರೆಸ್ ಕಾರ್ಯಕರ್ತರು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ, ಹಾಡೋತಿ ವಿಕಾಸ ಮೋರ್ಚಾದ ಸಂಚಾಲಕ ರಾಜೇಂದ್ರ ಸಂಖ್ಲಾ ಹೇಳಿದ್ದಾರೆ. ಬಿಜೆಪಿಯ ಈ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರು ಅವರ ಕಚೇರಿಗೆ ಬೆಂಕಿ ಹಚ್ಚುತ್ತಾರೆ. ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕಿ ಹಾಗೂ ಮಾಜಿ ಶಾಸಕಿ ಪೂನಂ ಗೋಯಲ್ ವಿರುದ್ಧ ಬಹಿರಂಗವಾಗಿ ಘೋಷಣೆಗಳನ್ನು ಕೂಗಿದರು.

ಪೂನಂ ಗೋಯಲ್ ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಕಾರ್ಯಕರ್ತರು ಹೇಳಿದ್ದಾರೆ. ಸದ್ಯ ಇ.ಡಿ ರಾಹುಲ್ ಗಾಂಧಿಗೆ ಮುಂದಿನ ವಿಚಾರಣೆಗೆ ಸಮನ್ಸ್ ನೀಡಿಲ್ಲ ಎಂಬುದು ಖಚಿತವಾದ ಬೆನ್ನಲ್ಲೇ ರಾಹುಲ್ ಗಾಂಧಿಗೆ ಇ.ಡಿ ವಿಚಾರಣೆ ಅಂತ್ಯವಾಗಿದ್ದು, ಕಾಂಗ್ರೆಸ್ ಮುಖ್ಯಸ್ಥೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮುಂದಿನ ವಿಚಾರಣೆ ನಡೆಯಲಿದೆ. ರಾಹುಲ್ ಗಾಂಧಿ ಅವರ ಸಂದೇಶಕ್ಕಾಗಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೆಹಲಿಯಲ್ಲಿ ಕಾಯುತ್ತಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.