ಸೋನಿಯಾ ಗಾಂಧಿಗೆ ಇ.ಡಿ ವಿಚಾರಣೆ ಮುಂದುವರಿಕೆ ; ‘ಸತ್ಯಾಗ್ರಹ’ ಮುಂದುವರೆಸುತ್ತೇವೆ ಎಂದ ಕಾಂಗ್ರೆಸ್

Congress

ನ್ಯಾಷನಲ್ ಹೆರಾಲ್ಡ್(National Herald Case) ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ಅಧಿನಾಯಕಿ(Congress President) ಹಣಕಾಸು ತನಿಖಾ ಸಂಸ್ಥೆ ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ(Sonia Gandhi) ಅವರಿಗೆ ಇಂದು (ಜುಲೈ 26) ಜಾರಿ ನಿರ್ದೇಶನಾಲಯ(ED) ಮುಂದೆ ಮತ್ತೆ ಹಾಜರಾಗಲು ತಿಳಿಸಿದೆ.

ಈ ನಡುವೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಮತ್ತೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವ ಮುನ್ನವೇ ‘ಸಂಸದ್ ಟು ಸಡಕ್’ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜಾಗಿದೆ. ಮಂಗಳವಾರ ಬೆಳಗ್ಗೆ ಸಂಸತ್ ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ನ ಎಲ್ಲಾ ಲೋಕಸಭಾ ಸಂಸದರು ಸಭೆ ನಡೆಸಲಿದ್ದಾರೆ. ಪಕ್ಷದ ಅಧ್ಯಕ್ಷರು ಮತ್ತೊಮ್ಮೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದಾಗ ಪಕ್ಷವು ಸತ್ಯಾಗ್ರಹ ನಡೆಸಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗೆ(PCC) ಯಾವುದೇ ಗಾಂಧಿ ಪ್ರತಿಮೆ ಅಥವಾ ತಮ್ಮ ರಾಜಧಾನಿಯ ಯಾವುದೇ ಐತಿಹಾಸಿಕ ಪ್ರಾಮುಖ್ಯತೆಯ ಸ್ಥಳದಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸುವಂತೆ ವಿನಂತಿಸಿದ್ದಾರೆ. ಈ ತನಿಖೆಯು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್-ಪ್ರಚಾರದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಕ್ಕಾಗಿ ಇ.ಡಿ ವಿರುದ್ಧ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

Exit mobile version