215 ಕೋಟಿ ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ ಎಂದು ಹೆಸರಿಸಿದ : ಇ.ಡಿ

ನವದೆಹಲಿ : ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ನ(Bollywood) ಖ್ಯಾತ ನಟಿ(Actor) ಜಾಕ್ವೆಲಿನ್ ಫರ್ನಾಂಡಿಸ್(Jacqualine Fernandez) ಹೆಸರು ಕೇಳಿ ಬಂದಿದೆ. 215 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ(ED) ಹೆಸರಿಸಿದೆ. ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ಸುಕೇಶ್ ಚಂದ್ರಶೇಖರ್ ಎಂಬ ವ್ಯಕ್ತಿಯೊಂದಿಗೆ ಅನೇಕ ದಿನಗಳಿಂದ ಒಡನಾಟ ಹೊಂದಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆತನಿಂದ ಅನೇಕ ಬೆಲೆ ಬಾಳುವ ಉಡುಗೊರೆಗಳನ್ನು ಪಡೆದಿದ್ದಾಳೆ. ಆದರೆ ಸುಕೇಶ್ ಚಂದ್ರಶೇಖರ್ ಮೇಲೆ ಹಲವು ರಾಜ್ಯಗಳ ಪೊಲೀಸರು, ಸಿಬಿಐ(CBI), ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆಯಿಂದ 32 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ಆತನ ಮೇಲಿವೆ.

ಈ ಹಿಂದೆ ಸುಕೇಶ್ ಚಂದ್ರಶೇಖರ್ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಜಾಕ್ವೆಲಿನ್ ಫರ್ನಾಂಡಿಸ್ ಕಳುಹಿಸಿದ್ದನ್ನು ಇ.ಡಿ ಪತ್ತೆ ಹಚ್ಚಿತ್ತು. ಅಕ್ರಮ ಹಣ(Illegal Money) ವರ್ಗಾವಣೆ ತಡೆ ಕಾಯ್ದೆಯಡಿ, ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸೇರಿದ 7 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿತ್ತು. ಅದೇ ರೀತಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಸುಕೇಶ್ ಚಂದ್ರಶೇಖರ್ ಜೊತೆಗಿನ ನಂಟುಗಳ ಆರೋಪದ ಮೇಲೆ ಇಡಿ ಹಲವು ಬಾರಿ ಪ್ರಶ್ನಿಸಿತ್ತು.

ಇದೀಗ ಸುಕೇಶ್ ಚಂದ್ರಶೇಖರ್ ಸುಲಿಗೆ ಮಾಡಿದ ಹಣದ ಫಲಾನುಭವಿ ಜಾಕ್ವೆಲಿನ್ ಫರ್ನಾಂಡಿಸ್ ಎಂದು ಇ.ಡಿ ಪತ್ತೆ ಮಾಡಿದ್ದು, ಕಳ್ಳ ಸುಕೇಶ್ ಚಂದ್ರಶೇಖರ್ ಸುಲಿಗೆಕೋರ ಎಂದು ಆಕೆಗೆ ತಿಳಿದಿತ್ತು ಎಂದು ಇ.ಡಿ ಆರೋಪ ಪಟ್ಟಿಯಲ್ಲಿ ದಾಖಲಿಸಿದೆ. ಇನ್ನು ದೆಹಲಿಯ ಉದ್ಯಮಿಯೊಬ್ಬರ ಪತ್ನಿಯಿಂದ ಸುಕೇಶ್ ಚಂದ್ರಶೇಖರ್ 215 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸುಕೇಶ್ ದೆಹಲಿಯ ಜೈಲಿನಲ್ಲಿದ್ದಾಗ ಪ್ರಧಾನಿ ಕಚೇರಿ,

ಕಾನೂನು ಸಚಿವಾಲಯ ಮತ್ತು ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಸಂತ್ರಸ್ತ ಮಹಿಳೆಯಿಂದ ಹಣ ವಸೂಲಿ ಮಾಡಿದ್ದಾನೆ. ಸಂತ್ರಸ್ತೆಯ ಪತಿಗೆ ಜಾಮೀನು ದೊರಕಿಸಿಕೊಡುವುದಾಗಿ ಸುಕೇಶ್ ದೂರವಾಣಿ ಕರೆಗಳಲ್ಲಿ ಹೇಳಿಕೊಂಡಿದ್ದಾನೆ ಎಂದು ಇ.ಡಿ ಆರೋಪಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಇಡಿ ಸುಕೇಶ್ ಚಂದ್ರಶೇಖರ್ ಅವರನ್ನು ಬಂಧಿಸಿತ್ತು.

Exit mobile version