New Delhi : ದೆಹಲಿ ಮದ್ಯ ನೀತಿ ಪ್ರಕರಣ ; ದೇಶದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇ.ಡಿ ದಾಳಿ!

New Delhi : ದೆಹಲಿ(New Delhi) ಮದ್ಯ ನೀತಿ(Liqour Policy) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಹೈದರಾಬಾದ್, ಬೆಂಗಳೂರು, ಮಂಗಳೂರು ಮತ್ತು ಚೆನ್ನೈ ಸೇರಿದಂತೆ ದೇಶದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದೆ.

ಇದಕ್ಕೂ ಮೊದಲು ಸೆಪ್ಟೆಂಬರ್ 6 ರಂದು, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಸೇರಿದಂತೆ 35ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿತ್ತು. ದೆಹಲಿಯಲ್ಲಿ ಎಎಪಿ ಸರ್ಕಾರ(AAP Government) ಜಾರಿಗೊಳಿಸಿದ ಹೊಸ ಮದ್ಯ ನೀತಿಯ ಕರಡು ತಯಾರಿಕೆಯಲ್ಲಿ ಭಾಗಿಯಾಗಿರುವ ಕರಡು ತಯಾರಕರು ಸೇರಿದಂತೆ ಮದ್ಯದ ವ್ಯಾಪಾರದಲ್ಲಿ ತೊಡಗಿರುವವರ ಮನೆಗಳಲ್ಲಿ ಶೋಧ ನಡೆಸಲಾಗಿತ್ತು.

ಇದನ್ನೂ ಓದಿ : https://vijayatimes.com/congress-workers-attack-vegetable-vendour/

ಇನ್ನು ದೆಹಲಿಯ ಆಮ್ ಆದ್ಮಿ ಸರ್ಕಾರವು 2021ರಲ್ಲಿ ಹೊರತಂದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿನ ಅಕ್ರಮಗಳ(Illegal) ಕುರಿತು ಇಡಿ ತನಿಖೆ ನಡೆಸುತ್ತಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(CBI) ದಾಖಲಿಸಿದ ಎಫ್ಐಆರ್(FIR) ಆಧರಿಸಿ ಇಡಿ ತನ್ನ ತನಿಖೆಯನ್ನು ಆರಂಭಿಸಿದೆ.

ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಮತ್ತು ಕೆಲವು ಅಧಿಕಾರಿಗಳನ್ನು ಹೆಸರಿಸಿದೆ. ಇದಕ್ಕೆ ಸಂಬಂಧಿಸಿಂತೆ ಕೆಲ ದಿನಗಳ ಹಿಂದೆ ಕೇಂದ್ರೀಯ ತನಿಖಾ ದಳ ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಮನೆ ಮೇಲೂ ದಾಳಿ ನಡೆಸಿತ್ತು.

ಇದನ್ನೂ ಓದಿ : https://vijayatimes.com/brahmastra-reaches-global-collection/

ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿಚಾರಣೆಯನ್ನು ನಡೆಸಿತ್ತು. ಈಗ ನಿಷ್ಕ್ರಿಯಗೊಂಡಿರುವ ಮದ್ಯ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳು ಮತ್ತು ಭ್ರಷ್ಟಾಚಾರದ ಎಲ್ಲಾ ಆರೋಪಗಳನ್ನು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಎಎಪಿ ತಳ್ಳಿಹಾಕಿದೆ. ಆದರೆ ಈ ಕುರಿತು ತನಿಖೆ ಮುಂದುವರೆದಿದೆ.

Exit mobile version