download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಪಂಜಾಬ್‌ ಸಿಎಂ ಸಂಬಂಧಿಕರ ಮನೆಯ ಮೇಲೆ ‘ಇಡಿ’ ದಾಳಿ

ಮೂಲಗಳ ಪ್ರಕಾರ ಲೂದಿಯಾನದಲ್ಲಿರುವ ಚನ್ನಿ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, 6 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿದೆ. 2018ರಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿತ್ತು. ಈಗ ಅಕ್ರಮ ಗಣಿಗಾರಿಕೆ ನಿಲ್ಲಿಸಿದ್ದರೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ed raids

ಲೂಧಿಯಾನ ಜ 19 : ಪಂಜಾಬ್‌ನಲ್ಲಿ ಪ್ರಧಾನಿಗೆ ದಿಗ್ಬಂದನ ಹಾಕಿರುವ ಘಟನೆ ಮಾಸುವ ಮುನ್ನವೇ  ಇತ್ತ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಚನ್ನಿ ಅವರ ಸಂಬಂಧಿಗಳ ನಿವಾಸದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಕೋಟ್ಯಂತರ ರೂಪಾಯಿ ನಗದು ವಶಕ್ಕೆ ಪಡೆದಿದೆ.

ಮೂಲಗಳ ಪ್ರಕಾರ ಲೂದಿಯಾನದಲ್ಲಿರುವ ಚನ್ನಿ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, 6 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿದೆ. 2018ರಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿತ್ತು. ಈಗ ಅಕ್ರಮ ಗಣಿಗಾರಿಕೆ ನಿಲ್ಲಿಸಿದ್ದರೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಸಿಎಂ ಚರಣ್ ಜೀತ್ ಸಿಂಗ್ ಚನ್ನಿ ಅವರನ್ನು ಗುರಿಯಾಗಿಸಿಕೊಂಡು ಈ ರೀತಿಯಾಗಿ ಒತ್ತಡ ಹೇರಲು ಯತ್ನಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಪ್ರಕರಣದ ಸಂಪೂರ್ಣ ತನಿಖೆಯಾದ ಬಳಿಕ ಸತ್ಯಾ ಸತ್ಯತೆ ಹೊರಬರಲಿದೆ ಎಂದು ತಿಳಿದುಬಂದಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article