ಜುಲೈ 21 ರಂದು ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ಸಮನ್ಸ್ ನೀಡಿದ ಇ.ಡಿ

sonia gandhi

ನ್ಯಾಷನಲ್ ಹೆರಾಲ್ಡ್(National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್(Congress) ಅಧಿ ನಾಯಕಿ ಸೋನಿಯಾ ಗಾಂಧಿ(Sonia Gandhi) ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್(Summons) ನೀಡಿದೆ. ಸೋನಿಯಾ ಗಾಂಧಿ ಅವರಿಗೆ ಜುಲೈ 22 ರಂದು ಕೊನೆಗೊಳ್ಳುವ ನಾಲ್ಕು ವಾರಗಳ ಕಾಲಾವಕಾಶವನ್ನು ಈ ಹಿಂದೆ ನೀಡಲಾಗಿತ್ತು. ಜೂನ್‌ನಲ್ಲಿ, ಸಮನ್ಸ್ ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿ ನೀಡಿದ್ದ ಲಿಖಿತ ಮನವಿಯನ್ನು ಇಡಿ ಸ್ವೀಕರಿಸಿತ್ತು.

ಸೋನಿಯಾ ಗಾಂಧಿ ಅವರು ಕೋವಿಡ್ -19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ತನ್ನ ವಿಚಾರಣೆಯನ್ನು ಮುಂದೂಡುವಂತೆ ಕೋರಿ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದರು. ಅದರಂತೆಯೇ ಇ.ಡಿ ವಿಚಾರಣೆಯನ್ನು ಮುಂದೂಡುವ ಮುಖೇನ ಕೆಲ ವಾರಗಳ ಕಾಲಾವಕಾಶ ನೀಡಿತ್ತು. ಸೋನಿಯಾ ಗಾಂಧಿ ಅವರನ್ನು ಜೂನ್ 18 ರಂದು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜೂನ್ 12 ರಂದು ಅವರು ಕೋವಿಡ್ ತೊಡಕುಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು.

ಇದಕ್ಕೂ ಮುನ್ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸೂಚಿಸಲಾಗಿತ್ತು. ಜೂನ್ 8 ರಂದು ಇ.ಡಿ ಮುಂದೆ ಹಾಜರಾಗುವಂತೆ ಕೇಳಲಾಗಿತ್ತು, ಆದರೆ ಜೂನ್ 1 ರಂದು ಅವರು ಕೋವಿಡ್ -19 ಗೆ ಪರೀಕ್ಷೆಯಲ್ಲಿ ಪಾಸಿಟಿವ್ ಹೊಂದಿದ ಬಳಿಕ, ಇಡಿಯಿಂದ ಕೆಲ ಸಮಯ ಕೇಳಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ(Rahul Gandhi) ಅವರು ಸಾವಿರಾರು ಕೋಟಿ ರೂಪಾಯಿಗಳ ಭೂಕಬಳಿಕೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ,

ಬಿಜೆಪಿಯ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ(Delhi Highcourt) ಮೊಕದ್ದಮೆ ಹೂಡಿದಾಗ, ನ್ಯಾಷನಲ್ ಹೆರಾಲ್ಡ್ ವಿಷಯ ಮುನ್ನೆಲೆಗೆ ಬಂದಿತು. ರಾಹುಲ್ ಗಾಂಧಿ ನಿರ್ದೇಶಕರಾಗಿದ್ದ ಖಾಸಗಿ ಸಂಸ್ಥೆಯಾದ ಯಂಗ್ ಇಂಡಿಯಾ ಲಿಮಿಟೆಡ್ ಮೂಲಕ ಗಾಂಧಿಗಳು ಸಾರ್ವಜನಿಕ ಲಿಮಿಟೆಡ್ ಕಂಪನಿ – ಎಜೆಎಲ್ ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.

Exit mobile version