ಕೋಲ್ಕತ್ತ, ಜ. 02: ಮಾಜಿ ಕ್ರಿಕೆಟಿಗ ಹಾಗೂ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಲ್ಕತ್ತದ ವುಡ್‌ಲ್ಯಾಂಡ್ ಆಸ್ಪತ್ರೆಗೆ ಗಂಗೂಲಿ ಅವರನ್ನು ದಾಖಲಿಸಲಾಗಿದೆ. ಈ ವೇಳೆ ದಾದಾ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು, ಆಂಜಿಯೋಪ್ಲ್ಯಾಸ್ಟಿ ನಡೆಸಿದ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ ಎನ್ನಲಾಗಿದೆ.
ಸೌರವ್ ಗಂಗೂಲಿ ಅವರು ಶನಿವಾರ ಬೆಳಗ್ಗೆ ತಮ್ಮ ಮನೆಯ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Former India captain and current BCCI President Sourav Ganguly suffered a mild cardiac arrest earlier today. He is now in a stable condition.
— ICC (@ICC) January 2, 2021
We wish him a speedy recovery! pic.twitter.com/HkiwFhjyih