• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಾಲೆ ಆರಂಭಕ್ಕೆ ಕ್ಷಣಗಣನೆ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಶಾಲೆ ಆರಂಭಕ್ಕೆ ಕ್ಷಣಗಣನೆ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
0
SHARES
10
VIEWS
Share on FacebookShare on Twitter

ಮಕ್ಕಳ ಸುರಕ್ಷತೆ ಮತ್ತು ದಾಖಲಾತಿ (Education Department new guidelines) ಅಭಿಯಾನಕ್ಕೆ ಸರ್ಕಾರದ ವಿಶೇಷ ಒತ್ತು

ಸುರಕ್ಷತೆ, ಡಿಜಿಟಲ್ ಹಾಜರಿ ಮತ್ತು ದ್ವಿಭಾಷಾ ಶಿಕ್ಷಣದತ್ತ ಸರ್ಕಾರದ ಚಿತ್ತ

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಸೇರ್ಪಡೆಗೆ ವಿಶೇಷ ಯೋಜನೆಗಳು ಆರಂಭ

Bengaluru : ರಾಜ್ಯಾದ್ಯಂತ ಬೇಸಿಗೆ ರಜೆ ಅಂತ್ಯವಾಗುತ್ತಿರುವ (Education Department new guidelines) ಹಿನ್ನೆಲೆ ಜೂನ್ 1ರಿಂದ ಶಾಲೆಗಳು ಪುನರಾರಂಭವಾಗಲಿವೆ.

ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಇದೇ ವೇಳೆ ಶಿಕ್ಷಣ ಇಲಾಖೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗಾಗಿ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Education Department new guidelines

ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಪರಿಸರದ ಸ್ವಚ್ಛತೆ, ಡಿಜಿಟಲ್ (Digital) ಹಾಜರಿ ವ್ಯವಸ್ಥೆ (Education Department new guidelines) ಮತ್ತು ದ್ವಿಭಾಷಾ ಶಿಕ್ಷಣ ಪದ್ಧತಿ ಜಾರಿಗೊಳಿಸುವ ವಿಚಾರಗಳಿಗೆ ಇಲಾಖೆ ಹೆಚ್ಚಿನ ಆದ್ಯತೆ ನೀಡಿದೆ.

ಶಾಲೆ ಆರಂಭಕ್ಕೂ ಮುನ್ನ ಎಲ್ಲ ಸೌಲಭ್ಯಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಹಾಗೂ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ರಾಜ್ಯದ ಅನೇಕ ಭಾಗಗಳಲ್ಲಿ ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಶಾಲಾ ಕಟ್ಟಡಗಳ ಸುರಕ್ಷತೆ ಬಗ್ಗೆ ವಿಶೇಷ ಕಾಳಜಿ ವಹಿಸಲು ಸೂಚಿಸಲಾಗಿದೆ.

ಶಿಥಿಲಗೊಂಡಿರುವ ಕಟ್ಟಡಗಳು, ಶೌಚಾಲಯಗಳು ಹಾಗೂ ಅಡುಗೆ ಕೋಣೆಗಳ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಇಲಾಖೆ ಆದೇಶಿಸಿದೆ.

ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಅಪಾಯಕಾರಿಯಾದ ಕಟ್ಟಡಗಳನ್ನು ತೆರವುಗೊಳಿಸಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ತಿಳಿಸಲಾಗಿದೆ.

ಜೊತೆಗೆ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಮತ್ತು ಅಗತ್ಯ ಮೂಲಭೂತ ಸೌಲಭ್ಯಗಳ ಪರಿಶೀಲನೆ ಕಡ್ಡಾಯಗೊಳಿಸಲಾಗಿದೆ. ಶಾಲೆ ಆರಂಭಕ್ಕೂ ಮುನ್ನವೇ ಎಲ್ಲಾ ಸಿದ್ಧತೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಈ ಬಾರಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಡಿಜಿಟಲ್ ಹಾಜರಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿರುವುದು ವಿಶೇಷವಾಗಿದೆ. ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಆಧುನಿಕಗೊಳಿಸುವ

ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದೇ ವೇಳೆ ದ್ವಿಭಾಷಾ ಶಿಕ್ಷಣ ಪದ್ಧತಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.

ಉರ್ದು-ಇಂಗ್ಲಿಷ್ (Urdu-English) ದ್ವಿಭಾಷಾ ಮಾಧ್ಯಮಕ್ಕೆ ಪೂರ್ವಾನುಮತಿ ಪಡೆದಿರುವ ಶಾಲೆಗಳು ಈ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಬೋಧನೆಯನ್ನು ಜಾರಿಗೆ ತರಬೇಕು ಎಂದು ಸೂಚಿಸಲಾಗಿದೆ.

ಮಕ್ಕಳು ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆ ಆರಂಭದ ಹಿನ್ನೆಲೆ ಕೆಲವು ಪ್ರಮುಖ ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಮೇ 28ರೊಳಗೆ ಶಾಲೆಗಳ ಸಂಪೂರ್ಣ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸುರಕ್ಷತಾ ತಪಾಸಣೆ ಕಾರ್ಯ ಪೂರ್ಣಗೊಳಿಸಬೇಕು.

ಮೇ 29ರಂದು ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗಿ ಪೂರ್ವಸಿದ್ಧತಾ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. ಜೂನ್ 1ರಂದು ಶಾಲಾ

ಪ್ರಾರಂಭೋತ್ಸವ ಮತ್ತು ಮಕ್ಕಳ ದಾಖಲಾತಿ ಅಭಿಯಾನ ಅಧಿಕೃತವಾಗಿ ಆರಂಭವಾಗಲಿದ್ದು, ಜೂನ್ 30ರಂದು ದಾಖಲಾತಿ ಆಂದೋಲನ ಮುಕ್ತಾಯಗೊಳ್ಳಲಿದೆ.

ಈ ಅವಧಿಯಲ್ಲಿ ಹೆಚ್ಚು ಮಕ್ಕಳನ್ನು ಶಾಲೆಗೆ ಸೇರಿಸುವತ್ತ ವಿಶೇಷ ಗಮನ ಹರಿಸಲು ಇಲಾಖೆಯಿಂದ ಸೂಚನೆ ನೀಡಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಹಲವು ಕಡೆ ಹೊಸ ಪ್ರಯತ್ನಗಳು ನಡೆಯುತ್ತಿವೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಂ. ಪಾಟೀಲ (S.M. Patil) ಅವರು ಶಾಲೆಗೆ ಸೇರುವ ಪ್ರತಿಯೊಬ್ಬ ವಿದ್ಯಾರ್ಥಿಯ ಹೆಸರಿನಲ್ಲಿ ₹1000 ಎಫ್‌ಡಿ ಇಡುವ ವಿಶಿಷ್ಟ ಯೋಜನೆ ಜಾರಿಗೆ ತಂದಿದ್ದಾರೆ.

ಈ ಯೋಜನೆ ಪೋಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಸರ್ಕಾರಿ ಶಾಲೆಗಳತ್ತ ಜನರ ಆಕರ್ಷಣೆ ಹೆಚ್ಚಿಸುವ ಪ್ರಯತ್ನವಾಗಿ ಕಾಣಲಾಗಿದೆ.

ಒಟ್ಟಾರೆ, ಹೊಸ ಶೈಕ್ಷಣಿಕ ವರ್ಷವನ್ನು ಸುರಕ್ಷಿತ, ಆಧುನಿಕ ಮತ್ತು ವಿದ್ಯಾರ್ಥಿ ಸ್ನೇಹಿ ವಾತಾವರಣದಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ಇದನ್ನು ಓದಿ : https://vijayatimes.com/large-cap-funds-with-huge-profits/

Tags: educationdepartmentKarnatakareopenschoolStudents

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.