Visit Channel

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವುದು ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ: ಕುಮಾರಸ್ವಾಮಿ ವ್ಯಂಗ್ಯ

download

ಬೆಂಗಳೂರು, ಜೂ. 04: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಇದು ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ತೀರ್ಮಾನಕ್ಕೆ ಕಿಡಿಕಾರಿರುವ ಅವರು, ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು ಎಂದಿದ್ದಾರೆ.

ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು. ಎಸೆಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನ ಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ
ಮಂತ್ರಿಯೋ? ಎಂದು ಪ್ರಶ್ನಿದ್ದಾರೆ.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ. ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.