English English Kannada Kannada

ಏಕದಿನ & ಟಿ20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‌ ಬೈ..?

Share on facebook
Share on google
Share on twitter
Share on linkedin
Share on print

ಕೊಹ್ಲಿ ಜಾಗಕ್ಕೆ ನಾಯಕನಾಗಿ ಯಾರು ಬರಲಿದ್ದಾರೆ?

ನವದೆಹಲಿ: ಏಕದಿನ ಹಾಗೂ ಟಿ20 ನಾಯಕತ್ವಕ್ಕೆ ವಿರಾಟ್‌ ಕೋಹ್ಲಿ ಗುಡ್‌ ಬೈ ಹೇಳಲಿದ್ದಾರಾ? ಈ ಸುದ್ದಿ ಭಾರತೀಯ ಕ್ರಿಕೆಟ್ ಪಾಳಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಅಷ್ಟಕ್ಕೂ ಟಿ20 ವಿಶ್ವಕಪ್‌ ಟೂರ್ನಿ ಕೆಲವೇ ದಿನಗಳು ಬಾಕಿ ಇರುವಾಗ ಇಂತಹದ್ದೊಂದು ಸುದ್ದಿ ಸದ್ದು ಮಾಡಲು ಕಾರಣ ಏನು? ವಿರಾಟ್‌ ಕೊಹ್ಲಿಯ ಈ ದಿಢೀರ್‌ ನಿರ್ಧಾರದ ಹಿಂದಿರುವ ಕಾರಣ ಏನು? ಯಾರಾಗಲಿದ್ದಾರೆ ಟೀಂ ಇಂಡಿಯಾದ ಮುಂದಿನ ನಾಯಕ ಈ ಸುದ್ದಿಯ ಕಂಪ್ಲೀಟ್‌ ಡೀಟೈಲ್ಸ್‌ ಇಲ್ಲಿದೆ ನೋಡಿ

ಮುಂಬರುವ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಭಾರತ ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ಕೆಳಗಿಳಿಯಲಿದ್ದು, ರೋಹಿತ್ ಶರ್ಮಾ ನಾಯಕತ್ವ ಪಟ್ಟ ವಹಿಸಿಕೊಳ್ಳಲಿದ್ದಾರೆ ಅನ್ನುವ ಮಾತು ಬಲವಾಗಿ ಕೇಳಿಬರುತ್ತಿದೆ.

ವಿರಾಟ್ ಕೊಹ್ಲಿ ಸೀಮಿತ ಓವರ್‌ಗಳ ನಾಯಕತ್ವ ಟಿ20 ವಿಶ್ವಕಪ್ ಟೂರ್ನಿ ನಂತರ ಮುಕ್ತಾಯವಾಗಲಿದೆ, ಆದರೆ ಟೆಸ್ಟ್‌ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ. 

ವಿರಾಟ್ ಕೊಹ್ಲಿ ಬ್ಯಾಟಿಂಗ್‌ನತ್ತ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬಂದಿದ್ದಾರೆಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. 

ಸ್ವತಃ ವಿರಾಟ್ ಕೊಹ್ಲಿಯೇ ಈ ತೀರ್ಮಾನಕ್ಕೆ ಬಂದಿದ್ದಾರೆಂದು ವರದಿಯಾಗಿದೆ. ಆದರೆ ಈ ಕುರಿತಂತೆ ಬಿಸಿಸಿಐ ಆಗಲಿ, ವಿರಾಟ್ ಕೊಹ್ಲಿಯಾಗಲೀ ಯಾವುದೇ ಪ್ರತಿಕ್ರಿಯೆಯನ್ನು ಇದುವರೆಗೂ ನೀಡಿಲ್ಲ

ವಿರಾಟ್ ಕೊಹ್ಲಿ ಟೀಂ ಇಂಡಿಯಾ ಪರ 65 ಟೆಸ್ಟ್ ಪಂದ್ಯಗಳನ್ನು ಮುನ್ನಡೆಸಿ 38 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ಇನ್ನು 95 ಏಕದಿನ ಪಂದ್ಯಗಳಲ್ಲಿ ನಾಯಕರಾಗಿ 65 ಪಂದ್ಯಗಳಲ್ಲಿ ತಂಡಕ್ಕೆ ಜಯ ದಕ್ಕಿಸಿಕೊಟ್ಟಿದ್ದಾರೆ. 45 ಟಿ20 ಪಂದ್ಯಗಳ ಪೈಕಿ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 29ರಲ್ಲಿ ಗೆಲುವಿನ ನಗೆ ಬೀರಿದೆ.

2014ರಲ್ಲಿ ಧೋನಿ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಬಳಿಕ ಕೊಹ್ಲಿ ನಾಯಕರಾಗಿ ಆಯ್ಕೆಯಾಗಿದ್ದರು. ಇನ್ನು 2017ರಲ್ಲಿ ಕೊಹ್ಲಿ ಮೂರು ಮಾದರಿಯ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಹಲವು ಸ್ಮರಣೀಯ ಗೆಲುವುಗಳನ್ನು ದಾಖಲಿಸಿದೆ.

32 ವರ್ಷದ ವಿರಾಟ್ ಕೊಹ್ಲಿ ಸದ್ಯ ಟೀಂ ಇಂಡಿಯಾದ ಮೂರು ಮಾದರಿಯಲ್ಲೂ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಆದರೆ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿಯನ್ನು ಜಯಿಸಿಲ್ಲ ಎನ್ನುವ ಅಪವಾದವಿದೆ.

ಇನ್ನು ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ 10 ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಮುನ್ನೆಡೆಸಿ 8 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ಇನ್ನು ಭಾರತ ಪರ 19 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಹಿಟ್‌ಮ್ಯಾನ್‌ 15 ಬಾರಿ ಟೀಂ ಇಂಡಿಯಾ ಗೆಲುವಿನ ನಗೆ ಬೀರುವಂತೆ ಮಾಡಿದ್ದಾರೆ.

Submit Your Article