vijaya times advertisements
Visit Channel

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

Old woman

ಹಿರಿಯರು ದೇವರಿದ್ದ ಹಾಗೆ. ಅವರ ಅನುಭವ, ಮಾರ್ಗದರ್ಶನ, ಆಶೀರ್ವಾದ ನಮಗೆ ಶ್ರೀರಕ್ಷೆ. ‘ಹಿರಿಯರು ಮನೆಯ ಲಕ್ಷಣ, ಅವರಿಲ್ಲದ ಮನೆ ಭಣ ಭಣ’ ಎನ್ನುವ ಮಾತುಗಳಿವೆ. ನಮಗಾಗಿ ಸಾಕಷ್ಟು ತ್ಯಾಗ ಮಾಡಿರುವ ಹಿರಿಯರನ್ನು ಗೌರವಿಸುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿ ಕೂಡ. ಆದರೆ ಇತ್ತೀಚಿಗೆ ಹಿರಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೇನೂ ಕಡಿಮೆಯಿಲ್ಲ, ಅಂತಹ ಒಂದು ಘಟನೆ ಇತ್ತೀಚಿಗೆ ಒರಿಸ್ಸಾದಲ್ಲಿ(Odisha) ನಡೆದಿದೆ.

Old man


ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ! ಮೃತಪಟ್ಟ ವ್ಯಕ್ತಿಯನ್ನು ಕುರ್ಶಾ ಮಣಿಯಕ ಎಂದು ಗುರುತಿಸಲಾಗಿದ್ದು, ವೈಯಕ್ತಿಕ ವಿವಾದದ ಹಿನ್ನೆಲೆಯಲ್ಲಿ ತನ್ನ ಮಗನ ಮನೆಯ ಮೇಲಿದ್ದ ಅಸ್ಬೆಸ್ಟಾಸ್ ಶೀಟನ್ನು ಮುರಿದ ನಂತರ ತನ್ನ ಕುಟುಂಬದ ಸದಸ್ಯರೊಂದಿಗೆ ತೀವ್ರ ವಾಗ್ವಾದಕ್ಕೆ ಇಳಿದಿದ್ದಾರೆ.

ಆಗ, ಮಣಿಯಕನ ಸಹೋದರ, ಮಗ ಮತ್ತು ಸೊಸೆ ಅವರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮರದ ದೊಣ್ಣೆಗಳಿಂದ ಹಲ್ಲೆ(Murder) ಮಾಡಿದಾಗ ಜಗಳವು ತಿರುವು ಪಡೆಯಿತು. ವೀಡಿಯೊಗಳಲ್ಲಿ ಮಹಿಳೆ ಮತ್ತು ಯುವಕ ವಯಸ್ಸಾದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಹೊಡೆಯುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಾಗದೆ, ದಾಳಿಯಿಂದ ಗಂಭೀರವಾಗಿ ಗಾಯಗೊಂಡು ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ, ಆರೋಪಿಯು ಸ್ಥಳೀಯರ ಸಹಾಯದಿಂದ ದೇಹವನ್ನು ದಹನ ಮಾಡಿದ್ದಾನೆ.

Old woman


ನಂತರ, ಕೆಲವು ಗ್ರಾಮಸ್ಥರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಅಪರಾಧ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡವು ಒಬ್ಬ ವ್ಯಕ್ತಿಯನ್ನು ಬಂಧಿಸಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. “ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News

Paneer
ಆರೋಗ್ಯ

ರುಚಿಯಷ್ಟೇ ಅಲ್ಲ, ಆರೋಗ್ಯಕ್ಕೂ ವರದಾನ ನಾವು ಪ್ರತಿದಿನ ಬಳಸುವ ಪನೀರ್

ಪನೀರ್ ಕೇವಲ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ, ನಮ್ಮ ಆರೋಗ್ಯದ ರಕ್ಷಣೆಯಲ್ಲಿ ಕೂಡ ಇದರ ಪ್ರಯೋಜನಗಳು ಅಪಾರ. ಆದರೆ ಹೆಚ್ಚಿನವರಿಗೆ ಇದರ ಬಗ್ಗೆ ಅರಿವೇ ಇಲ್ಲ.

ದೇಶ-ವಿದೇಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಾವಲಿಗೆ 42 ಕಾರುಗಳು‌ ; ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Mallikarjun Kharge
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಚಿತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನದತ್ತ ; ಅಧ್ಯಕ್ಷ ಸ್ಥಾನ ಬಹುತೇಕ ಖಚಿತ

ಈ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅವರು ಅಂಗೀಕರಿಸುವ ಸಾಧ್ಯತೆ ಇದ್ದು, ಹೊಸ ರಾಜ್ಯಸಭಾ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

PFI
ದೇಶ-ವಿದೇಶ

ಬಂಧಿತ PFI ಕಾರ್ಯಕರ್ತರನ್ನು 21 ದಿನಗಳ ಕಸ್ಟಡಿಗೆ ಕಳುಹಿಸಿದ NIA ಕೋರ್ಟ್!

ಬಂಧಿತರ ಮೇಲೆ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸಿರುವ ಮತ್ತು ಹಿಂದೂ ಕಾರ್ಯಕರ್ತರನ್ನು ಹತ್ಯೆ(Murder) ಮಾಡಿರುವ ಆರೋಪವನ್ನು ಹೊರಿಸಲಾಗಿದೆ.