download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಪಂಚ ರಾಜ್ಯ ಚುನಾವಣೆಗೆ ದಿನಾಂಕ ನಿಗದಿ

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ (Chief Election Commissioner Sushil Chandra), ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದರು.  ಒಟ್ಟಾರೆ 690 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನವದೆಹಲಿ ಜ 8 : ಪಂಚ ರಾಜ್ಯ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು  ಫೆ 10ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು ಮಾರ್ಚ್‌ 10ಕ್ಕೆ ಫಲಿತಾಂಶ ದೊರೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ (Chief Election Commissioner Sushil Chandra), ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದರು.  ಒಟ್ಟಾರೆ 690 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಚುನಾವಣೆಗೆ ತೆರಳಲು ಚುನಾವಣಾ ಸಿಬ್ಬಂದಿ ಡಬಲ್ ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಚುನಾವಣಾ ತೆರಳುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡಬೇಕು ಹಾಗೂ
ಎಲ್ಲಾ ಚುನಾವಣಾ ಸಿಬ್ಬಂದಿಯನ್ನು ಫ್ರಂಟ್ ಲೈನ್ ವರ್ಕರ್ ಆಗಿ ಪರಿಗಣನೆ ಮಾಡಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ.

5 ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 18.34 ಕೋಟಿ ಮತದಾರರು ಈ ಬಾರಿಯ ಹಕ್ಕು ಚಲಾಯಿಸುವ ಅವಕಾಶ ಪಡೆದುಕೊಂಡಿದ್ದಾರೆ ಎಂದು ಆಯೋಗ ಹೇಳಿದೆ. ಈ ಎಲ್ಲಾ ರಾಜ್ಯಗಳಿಂದ 24.5 ಲಕ್ಷ ಹೊಸ ಮತದಾರರು ಇದೇ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ  ಎಂದು ತಿಳಿಸಿದೆ. ಕೋವಿಡ್ ಕಾರಣದಿಂದಾಗಿ ಪ್ರತಿ ಮತಗಟ್ಟೆಯಲ್ಲಿ 1250 ಮಾತ್ರವೇ ಮತ ಚಲಾಯಿಸಬಹುದಾಗಿದೆ. ಇನ್ನು ಅಭ್ಯರ್ಥಿಗಳಿಗೆ ಆನ್ ಲೈನ್ ನಲ್ಲಿ ನಾಮಪತ್ರ ಸಲ್ಲಿಸುವ ಅವಕಾಶವನ್ನೂ ಆಯೋಗ ನೀಡಿದೆ. ಕೋವಿಡ್ ಪಾಸಿಟಿವ್ ಆದ ವ್ಯಕ್ತಿಗಳು, 80 ವರ್ಷಕ್ಕಿಂತ ಹಿರಯ ವ್ಯಕ್ತಿಗಳು ಹಾಗೂ ದಿವ್ಯಾಂಗ ವ್ಯಕ್ತಿಗಳಿಗೆ ಅಂಚೆಯ ಮೂಲಕ ಮತ ಹಾಕುವ ವ್ಯವಸ್ಥೆ ಇರಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ವೇಳಾಪಟ್ಟಿ

 • ಜನವರಿ 14ಕ್ಕೆ ಅಧಿಸೂಚನೆ ಪ್ರಕಟ f20f230 23307
 • ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ
 • ಫೆ. 10ಕ್ಕೆ ಮೊದಲ ಹಂತದ ಮತದಾನ
 • ಫೆ 14ಕ್ಕೆ 2ನೇ ಹಂತದ ಮತದಾನ
 • ಫೆ 20ಕ್ಕೆ 3ನೇ ಹಂತದ ಮತದಾನ
 • ಫೆ 23ಕ್ಕೆ 4ನೇ ಹಂತದ ಮತದಾನ
 • ಫೆ 27ಕ್ಕೆ 5ನೇ ಹಂತದ ಮತದಾನ
 • ಮಾ 3ಕ್ಕೆ 6ನೇ ಹಂತದ ಮತದಾನ
 • ಮಾ 7ಕ್ಕೆ 7ನೇ ಹಂತದ ಮತದಾನ
 • ಪಂಜಾಬ್, ಉತ್ತರಾಖಂಡ್, ಗೋವಾ ರಾಜ್ಯಗಳಿಗೆ ಒಂದೇ ಹಂತದಲ್ಲಿ ಮತದಾನ
 • ಮಾರ್ಚ್ 10ಕ್ಕೆ ಪಂಚ ರಾಜ್ಯಗಳ ಫಲಿತಾಂಶ

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article