ಪಂಚ ರಾಜ್ಯ ಚುನಾವಣೆಗೆ ದಿನಾಂಕ ನಿಗದಿ

ನವದೆಹಲಿ ಜ 8 : ಪಂಚ ರಾಜ್ಯ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು  ಫೆ 10ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು ಮಾರ್ಚ್‌ 10ಕ್ಕೆ ಫಲಿತಾಂಶ ದೊರೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ (Chief Election Commissioner Sushil Chandra), ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದರು.  ಒಟ್ಟಾರೆ 690 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಚುನಾವಣೆಗೆ ತೆರಳಲು ಚುನಾವಣಾ ಸಿಬ್ಬಂದಿ ಡಬಲ್ ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಚುನಾವಣಾ ತೆರಳುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡಬೇಕು ಹಾಗೂ
ಎಲ್ಲಾ ಚುನಾವಣಾ ಸಿಬ್ಬಂದಿಯನ್ನು ಫ್ರಂಟ್ ಲೈನ್ ವರ್ಕರ್ ಆಗಿ ಪರಿಗಣನೆ ಮಾಡಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ.

5 ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 18.34 ಕೋಟಿ ಮತದಾರರು ಈ ಬಾರಿಯ ಹಕ್ಕು ಚಲಾಯಿಸುವ ಅವಕಾಶ ಪಡೆದುಕೊಂಡಿದ್ದಾರೆ ಎಂದು ಆಯೋಗ ಹೇಳಿದೆ. ಈ ಎಲ್ಲಾ ರಾಜ್ಯಗಳಿಂದ 24.5 ಲಕ್ಷ ಹೊಸ ಮತದಾರರು ಇದೇ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ  ಎಂದು ತಿಳಿಸಿದೆ. ಕೋವಿಡ್ ಕಾರಣದಿಂದಾಗಿ ಪ್ರತಿ ಮತಗಟ್ಟೆಯಲ್ಲಿ 1250 ಮಾತ್ರವೇ ಮತ ಚಲಾಯಿಸಬಹುದಾಗಿದೆ. ಇನ್ನು ಅಭ್ಯರ್ಥಿಗಳಿಗೆ ಆನ್ ಲೈನ್ ನಲ್ಲಿ ನಾಮಪತ್ರ ಸಲ್ಲಿಸುವ ಅವಕಾಶವನ್ನೂ ಆಯೋಗ ನೀಡಿದೆ. ಕೋವಿಡ್ ಪಾಸಿಟಿವ್ ಆದ ವ್ಯಕ್ತಿಗಳು, 80 ವರ್ಷಕ್ಕಿಂತ ಹಿರಯ ವ್ಯಕ್ತಿಗಳು ಹಾಗೂ ದಿವ್ಯಾಂಗ ವ್ಯಕ್ತಿಗಳಿಗೆ ಅಂಚೆಯ ಮೂಲಕ ಮತ ಹಾಕುವ ವ್ಯವಸ್ಥೆ ಇರಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ವೇಳಾಪಟ್ಟಿ

Exit mobile version