ಹೊಸದಿಲ್ಲಿ, ಏ. 27: ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮೇ 2ರಂದು ನಡೆಯಲಿದ್ದು, ಅಭ್ಯರ್ಥಿಗಳ ಗೆಲುವಿನ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ನಿಷೇಧ ಹೇರಿದೆ.
ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯಗಳು ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶ ವಿಧಾನಸಭಾ ಚುನಾವಣೆ ನಡೆದಿದೆ. ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ, ಅಭ್ಯರ್ಥಿಗಳ ಗೆಲುವಿನ ಸಂಭ್ರಮಾಚರಣೆ ಮಾಡದಂತೆ ನಿಷೇಧ ವಿಧಿಸಲಾಗಿದೆ.
ಈ ರಾಜ್ಯಗಳ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಜನದಟ್ಟಣೆ ಹೆಚ್ಚಾಗಿ ಕೋವಿಡ್ ವ್ಯಾಪಕವಾಗಿ ಹರಡಲು ಚುನಾವಣೆ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.