Visit Channel

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ಚುನಾವಣೆ

ಬೆಂಗಳೂರು ನ 29 : ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆದರೆ, ಡಿ. 30ರಂದು ಫಲಿತಾಂಶ ಹೊರಬೀಳಲಿದೆ.

5 ನಗರಸಭೆ, 19 ಪುರಸಭೆ, 34 ಪಂಚಾಯಿತಿಗಳ 1,185 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ವಾಪಸ್ ಪಡೆಯಲು ಡಿಸೆಂಬರ್ 18 ಕೊನೆಯ ದಿನವಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಸೂಚಿಸಿದೆ.

ಮುಂದಿನ ತಿಂಗಳ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಡಿಸೆಂಬರ್ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದ್ದು, ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.