ಧಾರವಾಡದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ: ಕೆರೆಯಲ್ಲಿ ನೀರಿದ್ದರೂ ಬೆಳೆಗೆ ಹರಿಸಲಾಗದೆ ಕಂಗಾಲಾದ ರೈತರು

Dharwad: ಧಾರವಾಡದಲ್ಲಿ (Dharwad) ಕೆಲಕಡೆ ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆ ಬೆಳೆಯಲು ಆಗುತ್ತಿಲ್ಲ. ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ವಿದ್ಯುತ್ ನಿರಂತರವಾಗಿ ಕೈ ಕೊಡುತ್ತಿದ್ದು, ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರಿಗೆ ಬಂದಿದೆ. ಬೆಳೆ ಕಳೆದುಕೊಳುವ ಆತಂಕದಲ್ಲಿ ರೈತ ಸಮುದಾಯ ಕಂಗಾಲಾಗಿದೆ. ಕೆರೆಯಲ್ಲಿ ನೀರಿದ್ದರೂ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ. ವಿದ್ಯುತ್ ಕಡಿತದಿಂದ ತೊಂದರೆ ಅನುಭವಿಸುತ್ತಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ ಮಾಡಿಕೊಂಡಿದ್ದು, ಮಳೆ ಕೈ ಕೊಟ್ಟು ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಈ ಹಿನ್ನೆಲೆ ವಿದ್ಯುತ್ ಉತ್ಪಾದನೆ ಕುಡ ಕುಂಟಿತವಾಗಿದ್ದು ರೈತರಿಗೆ ವಿದ್ಯುತ್ ಕೊರತೆ ಭಾರೀ ನಷ್ಟವನ್ನು ತಂದಿಟ್ಟಿದೆ.

ವಿದ್ಯುತ್ ನಿರಂತರವಾಗಿ ಕೈ ಕೊಡುತ್ತಿದ್ದು, ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರಿಗೆ ಬಂದಿದೆ. ಬೆಳೆ ಕಳೆದುಕೊಳುವ ಆತಂಕದಲ್ಲಿ ರೈತ ಸಮುದಾಯ ಕಂಗಾಲಾಗಿದೆ. ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ ಮಾಡಿಕೊಂಡಿದ್ದಾರೆ. ಕೆರೆಯಲ್ಲಿ ನೀರಿದ್ದರೂ ಬೆಳೆಗಳಿಗೆ ನೀರು ಹರಿಸಲು ಆಗುತ್ತಿಲ್ಲ. ವಿದ್ಯುತ್ ಕಡಿತದಿಂದ ತೊಂದರೆ ಅನುಭವಿಸುತ್ತಿದ್ದಾರೆ.

ಸ್ವಂತ ಖರ್ಚಿನಲ್ಲಿ ಕೆರೆ ನಿರ್ಮಿಸಿಕೊಂಡಿದ್ದು, ಬೆಣ್ಣೆಹಳ್ಳದಿಂದ ಪಂಪ್ (Pump) ಮೂಲಕ ರೈತರು ನೀರು ಸಂಗ್ರಹಿಸಿದ್ದಾರೆ. ಹತ್ತಾರು ಕಿ.ಮೀ. ಪೈಪ್ ಲೈನ್ (Pipe Line)ಮಾಡಿಕೊಂಡು ಬೆಣ್ಣೆಹಳ್ಳ ತುಂಬಿದಾಗ ನೀರು ತುಂಬಿಸಿಕೊಂಡಿದ್ದಾರೆ. ಆದರೆ ಕೆರೆಯಲ್ಲಿ ನೀರಿದ್ದರೂ ಬೆಳೆಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಸಧ್ಯ ಈರುಳ್ಳಿ ಬೆಳೆ ಕೈಗೆ ಬರುತ್ತಿರುವ ಸಮಯದಲ್ಲಿ ನೀರು ಹರಿಸಲಾಗುತ್ತಿಲ್ಲ.

ದಿನಕ್ಕೆ ಏಳು ಗಂಟೆ ವಿದ್ಯುತ್ ಪೂರೈಸಬೇಕಾಗಿರೋ ಹೆಸ್ಕಾಂ (Hescom) ಕೇವಲ 3-4 ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದೆ. ತಮಗೆ ಇಷ್ಟವಾದಾಗ ವಿದ್ಯುತ್ ಪೂರೈಸುತ್ತಿದ್ದಾರೆ. ಇದರಿಂದಾಗಿ ರೈತ ಸಮುದಾಯ ಸಂಕಷ್ಟದಲ್ಲಿದೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಹೀಗಾಗಿ ಈರುಳ್ಳಿ ಬೆಲೆ ನಾಶವಾಗುವ ಚಿಂತೆಯಲ್ಲಿ ರೈತರು ಕಣ್ಣೀರಿಡುತ್ತಿದ್ದಾರೆ. ಇನ್ನು ಇತ್ತೀಚೆಗೆ ಈರುಳ್ಳಿಗೆ ಉತ್ತಮ ಬೆಲೆ ಬಂದಿದೆ. ನೀರು ಹಾಯಿಸಿದರೆ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರಿಗೆ ವಿದ್ಯುತ್ ಪೂರೈಕೆ ಕೊರತೆ ಚಿಂತೆಗೆ ನೂಕಿದೆ.

ಭವ್ಯಶ್ರೀ ಆರ್.ಜೆ

Exit mobile version