200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

Karnataka : ರಾಜ್ಯದ ಎಲ್ಲ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್ (200 units of free electricity) ನೀಡಲಾಗುವುದು ಎಂದು ಘೋಷಣೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ (State Congress Govt) ಇದೀಗ ವಿದ್ಯುತ್ ದರದಲ್ಲೂ ಏರಿಕೆ ಮಾಡಿದೆ. ಉಚಿತ ವಿದ್ಯುತ್ (Electricity price hike) ಯೋಜನೆಯ ಲಾಭ ಸಾಮಾನ್ಯ ಜನರಿಗೆ ಲಭ್ಯವಾದರೆ, ದರ ಏರಿಕೆಯ ಬಿಸಿ ಯಾರಿಗೆ ತಟ್ಟಲಿದೆ ಎಂಬ ಪ್ರಶ್ನೆ ಅನೇಕರಲ್ಲಿ ಮನೆಮಾಡಿದೆ.

ತಜ್ಞರು ಹೇಳುವ ಪ್ರಕಾರ, ಗೃಹ ಬಳಕೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗಿದೆ. ಆದರೆ ವ್ಯಾಪಾರ ಉದ್ದೇಶದಿಂದ ಬಳಕೆ ಮಾಡಲಾಗುವ ವಿದ್ಯುತ್ಗೆ ಶುಲ್ಕ ವಿಧಿಸಲಾಗುತ್ತದೆ.

ಇದೀಗ ದರ ಏರಿಕೆ ಮಾಡಿರುವುದರಿಂದ ಇದರ ಹೊರೆ ಸಣ್ಣ ವ್ಯಾಪಾರಿಗಳಿಂದ ಹಿಡಿದು ದೊಡ್ಡದೊಡ್ಡ ವ್ಯಾಪಾರಿಗಳ ಮೇಲೆ ಬೀಳಲಿದೆ.

ತಮ್ಮ ಮೇಲಿನ ಹೊರೆ ತಗ್ಗಿಸಲು ವ್ಯಾಪಾರಿಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕಗಳನ್ನು ವಿಧಿಸಿದರೂ ಅಚ್ಚರಿ ಪಡಬೇಕಿಲ್ಲ.

ಅಂತಿಮವಾಗಿ ದರ ಹೆಚ್ಚಳದ ಹೊರೆ ಸಾಮಾನ್ಯ ಜನರ ಮೇಲೂ ಬೀಳುತ್ತದೆ. ಇನ್ನು ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ (Electricity price hike) ದರವನ್ನು ಏರಿಸಲಾಗಿದೆ ಎಂದು ಇಂಧನ ಇಲಾಖೆ ಹೇಳಿದೆ.

ಇಂಧನ ಇಲಾಖೆಯ (Department of Energy) ಆದೇಶವು ಎಲ್ಲಾ ಎಸ್ಕಾಮ್ಗಳಿಗೆ ಅನ್ವಯಿಸುತ್ತದೆ. ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ : https://vijayatimes.com/brijbhushan-challenge-for-wrestlers/

ಬೆಸ್ಕಾಂ ಗ್ರಾಹಕರು (Bescom customers) ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ.

ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಗೆಸ್ಕಾಂ (ಕಲಬುರಗಿ) ಗ್ರಾಹಕರು (Gescom customers) ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ : https://vijayatimes.com/bjp-sarcasm-about-siddaramaiah/


ಸೆಸ್ಕಾಂ (ಮೈಸೂರು) ಗ್ರಾಹಕರು (Sescom customers) ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

ಮೆಸ್ಕಾಂ (ಮಂಗಳೂರು) ಗ್ರಾಹಕರು (MESCOM customers) ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

Exit mobile version