Visit Channel

ಎಲ್ಲಾ ಎಪಿಎಂಸಿ ವೈಶಿಷ್ಟ್ಯಗಳ ಕಿರುಚಿತ್ರ; ಸಚಿವ ಎಸ್.ಟಿ. ಸೋಮಶೇಖರ್

WhatsApp Image 2020-12-28 at 6.12.14 PM (1)

ಬೆಂಗಳೂರು, ಡಿ. 28: ಎಪಿಎಂಸಿ ಮಹತ್ವ ಏನು..? ಯಾವ ಯಾವ ಎಪಿಎಂಸಿಗಳು ಯಾವುದಕ್ಕೆ ಪ್ರಖ್ಯಾತಿ ಪಡೆದಿದೆ…? ಅಲ್ಲಿಗೆ ಬರುವ ಪ್ರಮುಖ ಉತ್ಪನ್ನಗಳು ಯಾವುವು..? ಅವು ಯಾವ ಯಾವ ಕಡೆ ರಫ್ತಾಗುತ್ತದೆ.? ಯಾವ ಕಾರಣಕ್ಕೆ ಉಪಯೋಗವಾಗುತ್ತದೆ ಎಂಬಿತ್ಯಾದಿ ಮಾಹಿತಿಗಳುಳ್ಳ ಉತ್ಪನ್ನಗಳು ಹಾಗೂ ಅದರ ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೃಷಿ ಮಾರಾಟ ಮಂಡಳಿ ಪ್ರಧಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಎಲ್ಲ ಎಪಿಎಂಸಿಗಳಿಗೆ ಭೇಟಿ ನೀಡಿ ಅವುಗಳ ಸಾಧನೆ ಬಗ್ಗೆ, ಅಲ್ಲಿನ ಉತ್ಪನ್ನಗಳು ಹಾಗೂ ಅದರ ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಿ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುವುದು. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು, ಸದಾನಂದ ಗೌಡ ಅವರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಆಗುವ ಅನುಕೂಲಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ನೀಡಲಾಗಿದೆ. ಇನ್ನು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ರೈತರಿಗೆ ಅರಿವು ಮೂಡಿಸಲಾಗುವುದು. ಇದಕ್ಕೋಸ್ಕರವೇ ಕಿರುಚಿತ್ರ ನಿರ್ಮಾಣ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ಬದಲಾವಣೆಗೂ ಸರ್ಕಾರ ಬದ್ಧವಾಗಿದೆ. ಎಪಿಎಂಸಿ ಒಳಗೆ ಹಾಗೂ ಹೊರಗೆ ಮಾರಾಟ ಮಾಡಲು ಏಕರೂಪ ನೀತಿ ಅಳವಡಿಸುವ ಬಗ್ಗೆ ಚಿಂತನೆ ಮಾಡುತ್ತೇವೆ. ಇನ್ನು ಎಲ್ಲ 162 ಎಪಿಎಂಸಿಗಳಿಗೂ ನಾನು ಭೇಟಿ ನೀಡಿ ಅವಹಾಲುಗಳನ್ನು ಆಲಿಸಲಿದ್ದೇನೆ. ಈಗಿರುವ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು? ಯಾವ ಬದಲಾವಣೆಗಳನ್ನು ತಂದರೆ ಏನು ಮಾಡಬಹುದು? ಅಧಿಕಾರ ವಿಕೇಂದ್ರೀಕರಣ ಮಾಡಿ ಸ್ಥಳೀಯವಾಗಿ ಯಾವ ರೀತಿ ಅಧಿಕಾರ ನೀಡಬಹುದು ಎಂಬುದರ ಬಗ್ಗೆ ಗಮನಹರಿಸುತ್ತೇನೆ ಎಂದು ಭರವಸೆ ನೀಡಿದರು.

ಎಪಿಎಂಸಿ ವ್ಯವಸ್ಥೆ ಬಹಳ ದೊಡ್ಡದು. ಇದನ್ನು ದುರ್ಬಲಗೊಳಿಸುವುದು ಹಾಗೂ ಮುಚ್ಚುವುದು ಸರ್ಕಾರದ ಉದ್ದೇಶವಿಲ್ಲ. ಎಪಿಎಂಸಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಾಗೂ ನಾನು ಇರುವವರೆಗೂ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಚಿವರು ತಿಳಿಸಿದರು.

ಹಾಲಿ ಎಪಿಎಂಸಿಯಲ್ಲಿ ವಹಿವಾಟು ನಡೆಸಿದರೆ 60 ಪೈಸೆ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ದೊರೆತಿದೆ. ಇನ್ನು ಕೇಂದ್ರ ಸರ್ಕಾರ ಮಾರ್ಗಸೂಚಿ 10 ದಿನಗಳಲ್ಲಿ ಬರುವ ಸಾಧ್ಯತೆ ಇದ್ದು, ಅದು ಬಂದ ಮೇಲೆ ಎಪಿಎಂಸಿ ಹೊರಗೂ ಸಹ 60 ಪೈಸೆ ಶುಲ್ಕ ವಿಧಿಸುವ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ.‌

ಈ ಸಂದರ್ಭದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಎಪಿಎಂಸಿ ನಿರ್ದೇಶಕರಾದ ಕರಿಗೌಡ ಸೇರಿದಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ಸದಸ್ಯರು ಭಾಗವಹಿಸಿದ್ದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.