Visit Channel

ಎಲ್ಲರ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನಿಸಲಿ: ಡಿ.ಕೆ.ಶಿವಕುಮಾರ್

IMG-20201223-WA0025

ಬೆಂಗಳೂರು, ಡಿ. 23: ಶಾಲೆ ತೆರೆಯಬೇಕೋ ಬೇಡವೋ ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ಮಾಡಬೇಕು. ರಾಜಕಾರಣಿಗಳು ಏನೇ ಅಭಿಪ್ರಾಯ ಹೇಳಿದರೂ ಅಂತಿಮವಾಗಿ ವಿದ್ಯಾರ್ಥಿಗಳು, ಶಾಲೆಗಳು ಹಾಗೂ ಶಿಕ್ಷಕರ ಹಿತ ಹಾಗೂ ಭವಿಷ್ಯ ಕಾಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭದ ವಿಷಯದಲ್ಲಿ ನಾವು ರಾಜಕೀಯ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳುವುದಕ್ಕಿಂತ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಹಾಗೂ ಆ ತೀರ್ಮಾನದಲ್ಲಿ ಸ್ಪಷ್ಟತೆ ಇರಬೇಕು ಎಂದರು.

ಮಕ್ಕಳು ಮತ್ತು ಶಾಲೆ ಆರಂಭದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಪ್ರತಿ ನಿಮಿಷವೂ ಗೊಂದಲದಲ್ಲಿದೆ. ನಮ್ಮ ಶಿಕ್ಷಣ ಸಚಿವರು ಸಿಎಂ, ಶಾಲೆ ಆಡಳಿತ ಮಂಡಳಿ, ಪೋಷಕರ ಜತೆ ಮಾತನಾಡುವುದಾಗಿ ಹೇಳುತ್ತಾರೆ. ಸರ್ಕಾರ ಮೊದಲು ಗೊಂದಲ ನಿವಾರಣೆ ಮಾಡಬೇಕು. ಇಷ್ಟು ದಿನ ಸಂಸ್ಥೆಗಳು ನಡೆಯುತ್ತಿರಲಿಲ್ಲ. ಶಿಕ್ಷಕರಿಗೂ ಸಂಬಳ ನೀಡಬೇಕು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ.

ಪೋಷಕನಾಗಿ, ಶಿಕ್ಷಣ ಸಂಸ್ಥೆಯ ಭಾಗವಾಗಿ ನನಗೂ ಆತಂಕಗಳಿವೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಗೊಂದಲ ಇದೆ. ಸರ್ಕಾರದಲ್ಲಿ ದೊಡ್ಡ ಅನುಭವವಿರುವ ಪಂಡಿತರಿದ್ದಾರೆ. ಅವರಿಗೆ ನಾನ್ಯಾಕೆ ಸಲಹೆ ನೀಡಲಿ. ಅವರು ಏನು ಬೇಕಾದರೂ ತೀರ್ಮಾನ ಮಾಡಲಿ. ನಾವು ಯಾವುದೇ ಸಲಹೆ ಕೊಟ್ಟರೂ ಅದರ ವಿರುದ್ಧವಾಗಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಈ ಹಿಂದೆ ಅದನ್ನು ನೋಡಿದ್ದೇವೆ. ಅವರು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಅವರಿಗೆ ಅವರದೇ ಆದ ವೈಯಕ್ತಿಕ ಅಜೆಂಡಾ ಇದೆ. ಏನೇ ಆದರೂ ಅದಕ್ಕೆ ಕಾಂಗ್ರೆಸ್ ಹಾಗೂ ಡಿ.ಕೆ ಶಿವಕುಮಾರ್ ಕಾರಣ ಎಂದು ಹೇಳುತ್ತಾರೆ. ರೈತರು ಹೋರಾಟ ಮಾಡಿದರೆ ಕಾಂಗ್ರೆಸ್ ನವರು ಎತ್ತಿಕಟ್ಟಿದ್ದಾರೆ ಅಂತಾರೆ. ಒಟ್ಟಿನಲ್ಲಿ ಅವರು ನಮ್ಮನ್ನು ನೆನೆಸಿಕೊಳ್ಳುತ್ತಿರಬೇಕು ನೆನೆಸಿಕೊಳ್ಳಲಿ ಬಿಡಿ ಎಂದು ಟೀಕಿಸಿದರು.

ಇದೇ ವೇಳೆ‌ ರಾಜ್ಯದ ವಿವಿಧ ನಗರ ಪಾಲಿಕೆ‌ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೆಳಗಾವಿ, ಧಾರವಾಡ ಪಾಲಿಕೆ ಚುನಾವಣೆ ನಡೆಸಲು ನ್ಯಾಯಾಲಯ ಸಮಯ ನಿಗದಿ ಮಾಡಿದೆ. ಇನ್ನು ಮುಂದೆ ಯಾವುದೇ ಪಾಲಿಕೆ ಚುನಾವಣೆ ನಡೆದರು ನಮ್ಮ ಪಕ್ಷದ ಚಿಹ್ನೆ ಮೂಲಕ ಸ್ಪರ್ಧಿಸಿ, ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಇಷ್ಟು ದಿನಗಳ ಕಾಲ ಬೆಳಗಾವಿ ಪಾಲಿಕೆಯಯಲ್ಲಿ ಕಾಂಗ್ರೆಸ್ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡು ತನ್ನ ಅಭ್ಯರ್ಥಿ ಹಾಕುತ್ತಿರಲಿಲ್ಲ. ಈ ಬಾರಿಯಿಂದ ಎಲ್ಲ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆ ಮೂಲಕ ಸ್ಪರ್ಧಿಸಲಾಗುವುದು. ಎಲ್ಲ ವಾರ್ಡ್ ಮಟ್ಟದ ಸಮಿತಿ ಮಾಡಲು ಒಂದು ಸಮಿತಿ ರಚಿಸಲಾಗಿದೆ. ನಾವು ಚುನಾವಣೆಯಲ್ಲಿ ಗೆಲ್ಲುತ್ತೇವೋ, ಸೋಲುತ್ತೇವೋ ಅದು ನಂತರ. ನಮ್ಮ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುವುದು ಮುಖ್ಯ ಎಂದರು.

ಕುಮಾರಸ್ವಾಮಿ ಅವರು ಈ ಹಿಂದೆ ಮಾತ್ರ ನನ್ನ ಸ್ನೇಹಿತರಾಗಿರಲಿಲ್ಲ. ಈಗಲೂ ಅವರು ನನ್ನ ದೋಸ್ತಿಯೇ. ಮುಂದೆಯೂ ಇರುತ್ತಾರೆ. ಮಾಧ್ಯಮದವರು ಯಾವ ಆಧಾರದ ಮೇಲೆ ಹಳೇ ದೋಸ್ತಿ ಅಂತಾ ಹೇಳುತ್ತೀರಿ? ನೀವು ಇಬ್ಬರ ಮಧ್ಯೆ ದ್ವೇಷ ಇದೆ ಅಂತೀರಿ? ನಾನು ದ್ವೇಷ ಮಾಡುವ ಕಾಲ ಹೋಯ್ತು.

ಜೆಡಿಎಸ್ ಕೂಡ ಒಂದು ಪಕ್ಷ. ಅದರದೇ ಆದ ಸಂವಿಧಾನ, ಸಿದ್ಧಾಂತ ಇದೆ. ಅವರು ಹಾಗೂ ಬಿಜೆಪಿ ಹೇಗೆ ಒಪ್ಪಂದ ಮಾಡಿಕೊಳ್ಳುತ್ತಾರೋ ಅದು ಅವರಿಗೆ ಬಿಟ್ಟದ್ದು. ಬಿಜೆಪಿಯವರು ಅವರನ್ನು ಯಾವ ರೀತಿ ನೋಡುತ್ತಾರೋ ಗೊತ್ತಿಲ್ಲ. ನಾವಂತೂ ಆ ಪಕ್ಷವನ್ನು ಗೌರವದಿಂದ ನೋಡುತ್ತೇವೆ. ನಾನು ಬೇರೆ ಪಕ್ಷಗಳ ಬಗ್ಗೆ ಮಾತನಾಡಲ್ಲ. ಅವರು ಅನೇಕ ಬಾರಿ ಸರ್ಕಾರ ಮಾಡಿದ್ದಾರೆ. ನಾವು ಅವರ ಜತೆ ಸರ್ಕಾರ ಮಾಡಿದ್ದೇವೆ. ಅವರ ಬಗ್ಗೆ ಕೀಳಾಗಿ ಮಾತನಾಡಲು ನಾನು ಇಚ್ಚಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.