ಉದ್ಯಮಗಳಲ್ಲಿ ಸ್ಥಳೀಯರಿಗೆ ಕೆಲಸ ನೀಡಬೇಕು: ನಿರಾಕರಿಸಿದರೇ ಕ್ರಮ ಗ್ಯಾರಂಟಿ ಎಂದ ಎಂಬಿ ಪಾಟೀಲ್

Bengaluru: ಕರ್ನಾಟಕ (Karnataka) ಸರ್ಕಾರದಿಂದ ರಿಯಾಯಿತಿ, ಪ್ರೊತ್ಸಾಹ ಧನ ಸೇರಿದಂತೆ (Employment for Locals-MBPatil) ವಿವಿಧ ರೀತಿಯ ಸೌಲಭ್ಯಗಳನ್ನು

ಪಡೆದುಕೊಂಡು ಉದ್ಯಮಗಳನ್ನ (Industries) ಸ್ಥಾಪಿಸಿ, ನಂತರ ಸ್ಥಳೀಯರಿಗೆ ಕೆಲಸ (Jobs) ನೀಡಲು ಅಸಡ್ಡೆ ತೋರಿದರೇ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕೈಗಾರಿಕಾ

ಸಚಿವ ಎಂ.ಬಿ.ಪಾಟೀಲ್ (Employment for Locals-MBPatil) ಅವರು ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇನ್ಪೋಸಿಸ್ ಕಂಪನಿ (Infosys Company) ತನ್ನ ಘಟಕ ಸ್ಥಾಪಿಸುತ್ತದೆ ಎಂದು ಜಮೀನು ಪಡೆದುಕೊಂಡು ಗಿಡಗಳನ್ನು ನೆಟ್ಟು ತೋಟ ಮಾಡಿಕೊಂಡಿದ್ದು, ಒಬ್ಬರಿಗೂ

ಕೂಡ ಅವರು ಉದ್ಯೋಗ ನೀಡಿಲ್ಲ. ಜಮೀನು ಒದಗಿಸುವ ಸಂದರ್ಭದಲ್ಲಿ ಮಂಚೂಣಿಯಲ್ಲಿದ್ದ ನಾನು ಇಂದು ಅಲ್ಲಿನ ರೈತರ ಎದುರುಗಡೆ ನಿಂತು ಮಾತನಾಡಲು ಆಗುತ್ತಿಲ್ಲ ಎಂದು ಬಿಜೆಪಿ

ಶಾಸಕ ಅರವಿಂದ್ ಬೆಲ್ಲದ್ (Aravind Bellad)​ ಅಸಮಾಧಾನ ತೋಡಿಕೊಂಡರು.

ಈ ವೇಳೆ ಪ್ರತಿಕ್ರಿಯಿಸಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M B Patil), ಉದ್ಯಮಗಳನ್ನು ಸ್ಥಾಪಿಸುವ ಸಂದರ್ಭದಲ್ಲಿ ಭೂಮಿ ಕಳೆದುಕೊಂಡವರಿಗೆ ಅವರವರ ಅರ್ಹತೆಗೆ

ಅನುಸಾರವಾಗಿ ಉದ್ಯೋಗ ನೀಡಬೇಕು. ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ 2023-24ನೇ ಸಾಲಿನಲ್ಲಿ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 50,025 ಕೋಟಿ ರೂ.

ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು

ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ

ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅಂಕಿ-ಅಂಶಗಳ ಸಮೇತ ವಿವರಿಸಿದರು.

ರಾಜ್ಯದ ಮಿಕ್ಕ ಭಾಗಗಳಲ್ಲಿ ಬೆಂಗಳೂರನ್ನು ಹೊರತುಪಡಿಸಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರ್ಕಾರವು ಬಿಯಾಂಡ್ ಬೆಂಗಳೂರು

(Bengaluru) ಉಪಕ್ರಮವನ್ನು ಆರಂಭಿಸಿದ್ದು, ವಿವಿಧೆಡೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ನೀತಿಯಲ್ಲಿ ಹಲವು ಪ್ರೋತ್ಸಾಹಧನ

ಮತ್ತು ವಿನಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಸಚಿವ‌ ಎಂ.ಬಿ. ಪಾಟೀಲ್‌ ಹೇಳಿದರು.

ಇದನ್ನು ಓದಿ: ಆಸ್ತಿ ತೆರಿಗೆ ಬಾಕಿ ಆರೋಪ: ರಾಕ್​ಲೈನ್​ ಮಾಲ್​ಗೆ ಬೀಗ ಹಾಕಿದ ಬಿಬಿಎಂಪಿ

Exit mobile version