Visit Channel

ಎರಡು ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಸೆಲ್ಫ್‌‌ ಸರ್ಟಿಫಿಕೇಟ್‌‌‌‌ ಪಡೆದುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್

pro

ಬೆಂಗಳೂರು, ಜ. 01: ಇನ್ನೂ ಎರಡು ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ಅವರೇ ಸೆಲ್ಫ್‌‌ ಸರ್ಟಿಫಿಕೇಟ್‌‌‌‌ ಪಡೆದುಕೊಂಡಿದ್ದಾರೆ. ಸಿಎಂ ಬಿಎಸ್‌ವೈ ಅವರನ್ನು ಅಧಿಕಾರದಿಂದ ಯಾವಾಗ ಇಳಿಯುತ್ತೀರಿ ಎಂದು ನಾವು ಕೇಳಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌‌‌ ಹೇಳಿದರು.

ಹೊಸ ವರ್ಷದ ಪ್ರಯುಕ್ತ ನಾಡಿನ ಜನತೆಗೆ ಶುಭಾಶಯ ತಿಳಿಸಿ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನೆಮ್ಮದಿ ಹಾಗೂ ಆರೋಗ್ಯಕ್ಕೆ ಸಂಕಟವಾಗಿತ್ತು. ಅದೆಲ್ಲಾ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದರು.

ನಾನು ಶಾಲೆ ಮುಚ್ಚಬೇಕು ಎಂದು ಹೇಳುತ್ತಿಲ್ಲ. ಆದರೆ, ಶಾಲೆಗೆ ಬಹಳ ದಿನಗಳ ಬ್ರೇಕ್‌‌ ಹಾಕಬಾರದು. ಹೀಗೆ ಮಾಡಿದ್ದಲ್ಲಿ ಮಕ್ಕಳ ವರ್ತನೆಯಲ್ಲಿ ಬದಲಾವಣೆಯಾಗುತ್ತದೆ. ಅಲ್ಲದೇ ಗುಣಮಟ್ಟದ ಶಿಕ್ಷಣದ ಮೇಲೆ ತೊಂದರೆಯಗುತ್ತದೆ” ಎಂದು ಹೇಳಿದರು.

ಶಾಲಾರಂಭದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿ ಶಾಲಾ-ಕಾಲೇಜು ತೆರೆಯಲಿ. ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳ ಪ್ರಗತಿ ಮೇಲೆ ಸಮಸ್ಯೆಯಾಗುತ್ತದೆ” ಎಂದರು.

ರೂಪಾಂತರಿ ಕೊರೊನಾ ವಿಚಾರದ ಬಗ್ಗೆ ಸರ್ಕಾರಕ್ಕೆ ಸಾಮಾನ್ಯ ಜ್ಞಾನವಿರಬೇಕಿತ್ತು. ಅಲ್ಲಿಂದ ಬಂದ ಜನರನ್ನು ವಿಮಾನ ನಿಲ್ದಾಣದಲ್ಲಿಯೇ ಆರೋಗ್ಯ ತಪಾಸಣೆ ಮಾಡಿಸಬೇಕಿತ್ತು. ಸರ್ಕಾರವು ಆಡಳಿತ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.