ಪರಿಸರ ರಕ್ಷಣೆಗೆ ಸರ್ಕಾರದ ಖಡಕ್ ಸೂಚನೆ
ಸಂಸ್ಕರಿಸದ ತ್ಯಾಜ್ಯ ಬಿಡುವವರ ಮೇಲೆ ನಿಗಾ ಹೆಚ್ಚಿಸಿದ ಅರಣ್ಯ ಇಲಾಖೆ
ನದಿ ಮಾಲಿನ್ಯ ತಡೆಗೆ ಡ್ರೋನ್ ನಿಗಾ, ಕಠಿಣ ನಿಯಮ ಜಾರಿ
ರಾಜ್ಯದ ನದಿಗಳು ಹಾಗೂ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕಠಿಣ (eshwar khandre warns dumping waste in river) ಕ್ರಮಕ್ಕೆ ಮುಂದಾಗಿದೆ. ಸಂಸ್ಕರಿಸದ ತ್ಯಾಜ್ಯವನ್ನು ನೇರವಾಗಿ ನದಿಗಳಿಗೆ ಹರಿಸುವವರ ವಿರುದ್ಧ ಮೊದಲಿಗೆ ಎಚ್ಚರಿಕೆ ನೀಡಲಾಗುವುದು.
ಆದರೆ ಅದೇ ತಪ್ಪು ಮರುಕಳಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar B. Khandre) ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಹಾನಿ ಮಾಡುವವರ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ಇರದು ಎಂದು ಸ್ಪಷ್ಟಪಡಿಸಿದರು.

ಕುಮಾರಧಾರಾ ನದಿಗೆ ಕೆಲವು ಕಡೆಗಳಿಂದ ತ್ಯಾಜ್ಯ ಹಾಗೂ ಅಶುದ್ಧ (eshwar khandre warns dumping waste in river) ನೀರನ್ನು ನೇರವಾಗಿ ಹರಿಬಿಡುತ್ತಿರುವ ಬಗ್ಗೆ ಗಂಭೀರ ದೂರುಗಳು ಬಂದಿವೆ.
ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಪರಿಶೀಲನೆ ನಡೆಸಬೇಕು ಎಂದು ಸಚಿವರು ಸೂಚಿಸಿದರು.
ತ್ಯಾಜ್ಯ ಜಲ ಸಂಸ್ಕರಣಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಪರಿಸರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊದಲ ಹಂತದಲ್ಲಿ ಎಚ್ಚರಿಕೆ ನೀಡಲಾಗುತ್ತದೆ.
ಆದರೂ ನಿಯಮ ಪಾಲನೆ ಮಾಡದಿದ್ದರೆ ಕಾನೂನು ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಖಂಡ್ರೆ ಎಚ್ಚರಿಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ವರ್ಷಪೂರ್ತಿ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಭಕ್ತರ ಸುರಕ್ಷತೆ ಎರಡಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ
ಎಂದು ಸಚಿವರು ತಿಳಿಸಿದರು. ವಿಶೇಷವಾಗಿ ವನ್ಯಜೀವಿಗಳ ದಾಳಿಯಿಂದ ಜನರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ.
ಚಿರತೆಗಳ ಹಾವಳಿ ಕಂಡುಬರುವ ಪ್ರದೇಶಗಳಲ್ಲಿ ಹೆಚ್ಚುವರಿ ಬೋನುಗಳನ್ನು ಅಳವಡಿಸುವುದು, ಆನೆಗಳ ಸಂಚಾರ ತಡೆಯಲು ಕಂದಕ ಕಾಮಗಾರಿ ಪೂರ್ಣಗೊಳಿಸುವುದು ಹಾಗೂ ಸೌರ ತಂತಿ ಬೇಲಿ ನಿರ್ಮಾಣ ಮಾಡುವ ಕೆಲಸ ವೇಗಗೊಳಿಸಲಾಗಿದೆ ಎಂದು ಹೇಳಿದರು.
ಮಾನವನ ಜೀವ ಅತ್ಯಮೂಲ್ಯವಾಗಿದ್ದು, ಒಂದು ಜೀವಹಾನಿಯೂ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ವನ್ಯಜೀವಿಗಳ ಚಲನವಲನದ ಮೇಲೆ ನಿಗಾ ವಹಿಸಲು ಡ್ರೋನ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಲಾಗುತ್ತಿದೆ. ಈಗಾಗಲೇ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದ್ದು, ಅರಣ್ಯ ಪ್ರದೇಶಗಳ ಮೇಲ್ವಿಚಾರಣೆ ಬಲಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾಗ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿ ಹಾಗೂ ತಟ್ಟೆಗಳು ಎಸೆಯಲ್ಪಟ್ಟಿರುವುದು ಕಂಡು ಬೇಸರವಾಯಿತು ಎಂದರು.
ತಕ್ಷಣವೇ ಅಧಿಕಾರಿಗಳ ಸಭೆ ನಡೆಸಿ ಎರಡು ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರಲು ಸೂಚಿಸಿರುವುದಾಗಿ ತಿಳಿಸಿದರು.
ಪ್ಲಾಸ್ಟಿಕ್ ಬಳಕೆ ಹಾಗೂ ಕಸದ ಸಮಸ್ಯೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದ ಡೀಮ್ಡ್ ಅರಣ್ಯ ಸಮಸ್ಯೆ ಕುರಿತೂ ಸಚಿವರು ಪ್ರತಿಕ್ರಿಯೆ ನೀಡಿದರು. ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಲಕ್ಷಾಂತರ
ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಅರಣ್ಯ ಎಂದು ಉಲ್ಲೇಖಿಸಲಾಗಿದೆ. ಆದರೆ ಆ ಪ್ರದೇಶಗಳಲ್ಲಿ ಅಂಗನವಾಡಿ, ಸರ್ಕಾರಿ ಆಸ್ಪತ್ರೆ ಹಾಗೂ ಪಟ್ಟಾ ಭೂಮಿಗಳೂ ಸೇರಿವೆ.
ಈ ಗೊಂದಲ ನಿವಾರಣೆಗೆ ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೆ ನಡೆಸಲಾಗುತ್ತಿದೆ ಎಂದು ಖಂಡ್ರೆ ತಿಳಿಸಿದರು. ಸರ್ವೆಯರ್‌ಗಳ ಕೊರತೆ ಹಾಗೂ ಮುಷ್ಕರದ ನಡುವೆಯೂ ವಿಶೇಷ ಸಿಬ್ಬಂದಿಯನ್ನು ನಿಯೋಜಿಸಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯಸಭಾ ಚುನಾವಣೆ ಸಂಬಂಧ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕರು ದೆಹಲಿಗೆ ಭೇಟಿ ನೀಡಿರುವುದಾಗಿ ಇದೇ ವೇಳೆ ಅವರು ಹೇಳಿದರು.
ಇದನ್ನು ಓದಿ : https://vijayatimes.com/warning-about-itr-problem/