Bengaluru : ವಿಶೇಷಚೇತನರು (Special people) ಎಂದಿಗೂ ಸಮಾಜಕ್ಕೆ ಹೊರೆಯಲ್ಲ, ಬದಲಾಗಿ ಅವರು ನಮ್ಮ ಸಮಾಜದ ಆಸ್ತಿ (Community property) . ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವ ವಿಶೇಷಚೇತನರ ಸಬಲೀಕರಣಕ್ಕಾಗಿ (Empowerment of special minds) ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು (44 crores) ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಮಂಗಳವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Department of Women and Child Development, Empowerment of Disabled and Senior Citizens in Bangalore) ವತಿಯಿಂದ ನಡೆದ ಅಂತಾರಾಷ್ಟ್ರೀಯ ವಿಶೇಷಚೇತನರ ದಿನಾಚರಣೆ (International Day of Special Minds) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 15 ಲಕ್ಷ ವಿಶೇಷಚೇತನರಿದ್ದಾರೆ. ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ (Disabilities) ರೂ. 1400 ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000 ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ (Central Govt) ನೀಡಲಾಗುವ ವಿಶೇಷಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಶೇಷಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷ ನಾಲ್ಕು ಬಗೆಯ ವಿಶೇಷಚೇತನರ ಆರೈಕೆದಾರರಿಗೆ (Caregivers of special needs) ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ (Karnataka State) ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ (Current row) ಅನುದಾನಕ್ಕೆ ಒಳಪಡಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ( expert committee ) ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಶೇಷಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದಿದ್ದಾರೆ.