Visit Channel

ಸುಮಲತಾ ವಿರುದ್ಧ ಮಾಜಿ ಸಂಸದ ಶಿವರಾಮೇಗೌಡ ವಾಗ್ದಾಳಿ: ಯಾವುದಾದರೂ ಪಕ್ಷ ಸೇರುವಂತೆ ಸಂಸದೆಗೆ ಸಲಹೆ

cvr8-8-696x398

ಮಂಡ್ಯ, ಜು. 10: ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಮುಂಬರುವ ಜಿ.ಪಂ ಚುನಾವಣೆಗೆ ಸ್ವಾಭಿಮಾನದ ಅಭ್ಯರ್ಥಿಗಳನ್ನ ಹಾಕಲಿ, ಇದು ಚಾಲೆಂಜ್ ಎಂದು ಸಮಲತಾಗೆ ಸವಾಲು ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ಸಂಸದೆ
ಸುಮಲತಾಗೆ ಸರಿಯಾದ ಅಡ್ವೈಸರ್ ಇಲ್ಲ. ಅವರು ಒಂದು ಪಕ್ಷಕ್ಕೆ ಸೇರಿಕೊಳ್ಳಲಿ, ಬಿಜೆಪಿ ಇಲ್ಲ ಕಾಂಗ್ರೆಸ್ ಯಾವುದಾದರು ಸೇರಲಿ.
ಯಾವ ಪಕ್ಷವನ್ನು ಸೇರದಿದ್ರೆ ವಾಟ್ ನೆಕ್ಟ್? ಎಂದು ಪ್ರಶ್ನೆ ಮಾಡಿರುವ ಅವರು, ಮಂಡ್ಯ ಜನರು ದಡ್ಡರಲ್ಲ, ಒಂದು ಸಲ ಯಮಾರಿಸಿದ್ದೀರಾ, ಜನ ಮತ್ತೆ ಯಮಾರಲ್ಲ. ಯಾವುದಾದರೂ ಒಂದು ಪಕ್ಷ ಸೇರಿ ಆಗ ಅಲ್ಲಿನ‌ ಮುಖಂಡರಾದರು ನಿಮ್ಮ ಜೊತೆ ಬರ್ತಾರೆ ಎಂದು ಸುಮಲತಾಗೆ ರಾಜಕೀಯ ಕಿವಿಮಾತು ಹೇಳಿದರು.

ಮಂಡ್ಯ ಪಾಲಿಟಿಕ್ಸ್‌ನಲ್ಲಿ ಸುಮಲತಾ ಬಿಗ್ ಜೀರೋ, ಆಕೆ ಬಗ್ಗೆ ಮಾತನಾಡದಂತೆ ನಮ್ಮ ನಾಯಕರಲ್ಲಿ ಮನವಿ ಮಾಡ್ತೀನಿ. ದೊಡ್ಡ ಸೊನ್ನೆ ಇರುವಾಗ ಅಂಬರೀಶ್ ಹೆಸರೇಳಿಕೊಂಡು ಯಾರ್ರಿ ಹೋದವ್ರು? ಅಂಬರೀಶ್ ಗುಣವೇ ಬೇರೆ, ಸುಮಲತಾ ಗುಣವೇ ಬೇರೆ. ಅಂಬರೀಶ್ ಪತ್ನಿ ಎಂದು ಹೈಜಾಕ್ ಮಾಡಿ ಮಂಡ್ಯ ಜನರ ಮನಸ್ಸು ಗೆದ್ದಿದ್ದಾರೆ ಅಷ್ಟೇ ಎಂದು ಸಂಸದೆ ಸಮಲತಾ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ಕಾಲದಲ್ಲೂ ಗಣಿ ನಡೆಯುತ್ತಿತ್ತು ಅಲ್ವಾ? ಆಗ ಯಾಕೆ ಇಯಮ್ಮ ನಿಲ್ಲಿಸಲಿಲ್ಲ. ಮಂಡ್ಯ ಜಿಲ್ಲೆಯಿಂದ ಹೋದವರಿಗೆ ಕಾಫಿ ಬೇಡ, ನೀವು ಒಂದು ಲೋಟ ನೀರು ಕೊಟ್ಟಿದ್ದರೆ ಸಾಕಾಗಿತ್ತು.
ಮಂಡ್ಯ ಜನಕ್ಕೆ ಎಲ್ಲವೂ ಗೊತ್ತಿದೆ, ಹಾಗಾಗಿ ಇದನ್ನ ಇಲ್ಲಿಗೆ ಬಿಡಿ. ಜೆಡಿಎಸ್ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ ಎಂದರು.

ಸುಮಲತಾರನ್ನ ಜನ ಆಗಲೇ ಮರೆತಿದ್ರು, ಆದ್ರೆ ನಮ್ಮ ನಾಯಕರೇ ಮಾತನಾಡಿ ಮತ್ತೆ ನೆನಪಿಸಿದ್ರು. ಅಂಬರೀಶ್ ಸತ್ತಾಗ ಮಂಡ್ಯಕ್ಕೆ ಮೃತದೇಹ ತೆಗೆದುಕೊಂಡು ಹೋಗೋದು ಬೇಡ ಅಂತ ಈಯಮ್ಮ ಹೇಳಿದ್ರು. ಆದ್ರೆ ಕುಮಾರಸ್ವಾಮಿ ಮಂಡ್ಯಕ್ಕೆ ತಂದ್ರು, ರಾಜ್‌ಕುಮಾರ್ ಪಕ್ಕದಲ್ಲೇ ಅಂಬಿ ಇರಬೇಕು ಅಂತ ಸಮಾಧಿಗೆ ಜಾಗ ಕೊಟ್ರು.
ಸುಮಲತಾ ಆಂಧ್ರಕ್ಕೂ ಮಂಚವಾಡು ಅನಂತುಡು ಅಂದಂಗೆ ಅವರು ಅನಂತಪುರದವರು.
ಅಂಬರೀಶ್ ಮದ್ವೆ ಆಗಿ ಬಂದಮೇಲೆ ಅವರ ಧರ್ಮ‌ಪತ್ನಿ ಅಂತ ಸ್ವೀಕಾರ ಮಾಡಿದ್ದೇವೆ.
ಅಷ್ಟು ಬಿಟ್ರೆ ಬೇರೇನು ಇಲ್ಲಾ ಎನ್ನುವುದರ ಮೂಲಕ ಮತ್ತೆ ಸುಮಲತಾ ಮೂಲ‌ ಪ್ರಶ್ನಿಸಿದರು.

ಸಿನೆಮಾ ರೀತಿಯಲ್ಲೇ ಸಂಸದೆ ಆಗಿಯೂ ಸುಮಲತಾ ನಟನೆ ಮಾಡ್ತಿದ್ದಾರೆ. ಕರ್ಣ ಎಂದು ಹೆಸರು ಪಡೆದಿರುವ ಅಂಬರೀಶ್‌ ಅವರ ಕೊಡುಗೆಯೂ ಮಂಡ್ಯಕ್ಕೆ ಶೂನ್ಯ. ಸಂಸದೆ ಸುಮಲತಾ ಕೊರೊನಾ ಕಾಲದಲ್ಲಿ ಏನು ಮಾಡಿದ್ದಾರೆ.? ಎಂದು ಪ್ರಶ್ನಿಸಿದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.