ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು 11: ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ 55,155 ವಿದ್ಯಾರ್ಥಿಗಳ ಪೈಕಿ 20 522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇಕಡ 55.54% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸಾಧನೆ ಪ್ರದರ್ಶಿಸಿದ್ದಾರೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಸೆಪ್ಟೆಂಬರ್ 27 ಹಾಗೂ 29ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಕೊರೊನಾ ವೈರಸ್‌ ಸೋಂಕು ಕಾರಣದಿಂದಾಗಿ ಈ ಪರೀಕ್ಷೆಯನ್ನು ಬಹಳ ಸರಳೀಕೃತ ಮಾದರಿಯ್ಲಲಿ ನಡೆಸಲಾಗಿತ್ತು. ಒಂದು ದಿನ ಐಚ್ಛಿಕ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು

ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಫಲಿತಾಂಶದ ಮಾಹಿತಿ ದೊರೆಯಲಿದೆ.

ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ
1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ
2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ

Exit mobile version