• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದ 4 ಐತಿಹಾಸಿಕ ಸ್ಥಳಗಳಲ್ಲಿ ನಡೆಯಲಿದೆ ಉತ್ಖನನ ಕಾರ್ಯ..!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದ 4 ಐತಿಹಾಸಿಕ ಸ್ಥಳಗಳಲ್ಲಿ ನಡೆಯಲಿದೆ ಉತ್ಖನನ ಕಾರ್ಯ..!
0
SHARES
257
VIEWS
Share on FacebookShare on Twitter

Bengaluru: ರಾಜ್ಯದ ನಾಲ್ಕು ಪ್ರಮುಖ ಐತಿಹಾಸಿಕ ಸ್ಥಳ (Historical place)ಗಳಲ್ಲಿ ಉತ್ಖನನ ನಡೆಸಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮುಂದಾಗಿದೆ. ಈ ಕುರಿತು ಇತಿಹಾಸ ತಜ್ಞರು ಮತ್ತು ಪರಿಣಿತರೊಂದಿಗೆ ಚರ್ಚೆಯನ್ನು ನಡೆಸಲಾಗಿದ್ದು, ಕೇಂದ್ರ ಸರ್ಕಾರದ (Central Government) ಅನುಮತಿಯೊಂದಿಗೆ ಈ ಕಾರ್ಯ ನಡೆಸಲಾಗುತ್ತದೆ.

Historical Place

ಮೂಲಗಳ ಪ್ರಕಾರ, ಮೈಸೂರು (Mysore) ಜಿಲ್ಲೆಯ ತಲಕಾಡು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಣ್ಣೆ ಸೇರಿದಂತೆ ರಾಜ್ಯದ 4 ಐತಿಹಾಸಿಕ ನಿವೇಶನಗಳನ್ನು ಉತ್ಖನನ ಮಾಡಲು ರಾಜ್ಯ ಪುರಾತತ್ವ ಇಲಾಖೆ ಗುರುತಿಸಿದೆ. ಆದರೆ ಕೇಂದ್ರ ಪುರಾತತ್ವ ಇಲಾಖೆಯಿಂದ ಸದ್ಯಕ್ಕೆ ಮೈಸೂರು ಜಿಲ್ಲೆಯ ತಲಕಾಡಿನ (Talakadu) ಉತ್ಖನನಕ್ಕೆ ಮಾತ್ರ ಅನುಮತಿ ಸಿಕ್ಕಿದೆ.

ಇನ್ನು ಪುರಾತನ ಅವಶೇಷಗಳನ್ನು ಸಂಸ್ಕರಿಸುವ ಮತ್ತು ದಾಖಲು ಮಾಡುವ ನಿಟ್ಟಿನಲ್ಲಿ ಪುರಾತತ್ವ ಇಲಾಖೆಯು ಐತಿಹಾಸಿಕ ಸ್ಥಳಗಳಲ್ಲಿ ಹಮ್ಮಿಕೊಳ್ಳುತ್ತಿದ್ದ ಉತ್ಖನನ ಕಾರ್ಯವನ್ನು ಕೋವಿಡ್ (Covid) ನಂತರ ನಿಲ್ಲಿಸಲಾಗಿತ್ತು. ತಲಕಾಡು (ಮೈಸೂರು), ಹಂಪಿ (ವಿಜಯನಗರ), ಮಣ್ಣೆ (ಬೆಂಗಳೂರು ಗ್ರಾಮಾಂತರ), ಲಕ್ಕುಂಡಿ (ಗದಗ) ಜಾಗಗಳನ್ನು ಗುರುತಿಸಿದೆ. ಈ ಮಧ್ಯೆ ವಿಜಯನಗರ ಜಿಲ್ಲೆಯ ಹಂಪಿಯಲ್ಲಿಉತ್ಖನನ ನಡೆಸಲು ಕೇಂದ್ರದ ಆರ್ಕೆಯಾಲಜಿಕಲ್ ಸರ್ವೆ ಆಫ್ ಇಂಡಿಯಾಗೆ (Archaeological Survey of India) ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಗಂಗರ ರಾಜಧಾನಿಯಾಗಿದ್ದ ಮಣ್ಣೆ ಮತ್ತು ಲಕ್ಕುಂಡಿ (Lakkundi) ಯಲ್ಲಿ ತಜ್ಞರು ತಂಡದಿಂದ ನಿವೇಶನದ ಪರಿಶೀಲನೆ ಕಾರ್ಯ ಚಾಲ್ತಿಯಲಿದೆ.

Hampi

ಯಂತ್ರೋಪಕರಣಗಳ ಬಳಕೆ ಇಲ್ಲ: ಯಂತ್ರ ಬಳಸಿದರೆ ಅವಶೇಷಗಳಿಗೆ ಹಾನಿಯಾಗಬಹುದು ಎಂಬ ಕಾರಣದಿಂದಾಗಿ ಕಾರ್ಮಿಕರ ಮೂಲಕವೇ ಉತ್ಖನನ ಕಾರ್ಯ ನಡೆಯಲಿದೆ. ಹೀಗಾಗಿ ಈ ಕಾರ್ಯಕ್ಕೆ ನರೇಗಾ ಕಾರ್ಡ್ (Narega Card) ಹೊಂದಿರುವವರನ್ನೇ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಮಣ್ಣೆ: ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು (Tyamagondlu) ಹೋಬಳಿಯಲ್ಲಿನ ಮಣ್ಣೆ, ಈ ಹಿಂದೆ ಗಂಗರ ರಾಜಧಾನಿಯಾಗಿತ್ತು. ಇಲ್ಲಿರುವ ಕಪಿಲೇಶ್ವರ ಸ್ವಾಮಿ ದೇವಸ್ಥಾನ ಪ್ರಮುಖ ಐತಿಹಾಸಿಕ ಕೇಂದ್ರವಾಗಿದೆ. ಗಂಗರ ನಂತರ ಮಣ್ಣೆ ರಾಷ್ಟ್ರಕೂಟದ ಕಾಲದಲ್ಲಿ ಪ್ರಮುಖ ವ್ಯಾಪಾರ ಮತ್ತು ರಾಜಕೀಯ ಕೇಂದ್ರವಾಗಿತ್ತು ಎಂಬ ಉಲೇಖಗಳಿವೆ.

Tags: bengaluruHistorical Placenarega cardtalakadu

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.