Visit Channel

ಮಿತಿಮೀರಿದ ಕೊರೋನಾ ಪ್ರಕರಣ: ೧,೨೬, ೭೮೯ ಪ್ರಕರಣ ದಾಖಲು

f345a8b37007087fab62566af8e310f8ebd737468383b94636449daeaa9d0145

ದೆಹಲಿ, ಏ. 08: ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1,26,789 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ಛತ್ತೀಸಗಡದಲ್ಲಿ ಇದೇ ಮೊದಲ ಬಾರಿ ಸೋಂಕಿತರ ಸಂಖ್ಯೆ 10,000 ಗಡಿದಾಟಿದೆ. ಈ ಮೂಲಕ ದೇಶದ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ 1,29,28,574ಕ್ಕೆ ತಲುಪಿದೆ. ಈ ಪೈಕಿ 8,43,473 ಸಕ್ರಿಯ ಪ್ರಕರಣಗಳಿದ್ದು 1,18,51,393 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 1,66,862 ಮಂದಿ ಸಾವಿಗೀಡಾಗಿದ್ದು, 9,01,98,673 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 59,258 ಮಂದಿ ಚೇತರಿಸಿಕೊಂಡಿದ್ದು 685 ಮಂದಿ ಮೃತಪಟ್ಟಿದ್ದಾರೆ.

ನಾಲ್ಕು ದಿನಗಳ ಅವಧಿಯಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಮೂರು ಬಾರಿ 1ಲಕ್ಷದ ಗಡಿದಾಟಿದೆ. ಏಪ್ರಿಲ್ 7ರವರೆಗೆ 25,26,77,379 ಮಾದರಿಗಳನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ ಬುಧವಾರ 12,37,781 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹೇಳಿದೆ.

ಭಾರತೀಯ ವೈದ್ಯಕೀಯ ಸಂಘಟನೆ (IMA) ಸಾರ್ವತ್ರಿಕ ಲಸಿಕೆ ವಿತರಣೆಗೆ ಕರೆ ನೀಡಿದೆ. ಹಲವಾರು ಮುಖ್ಯಮಂತ್ರಿಗಳು ಸಾರ್ವತ್ರಿಕ ಲಸಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇನ್ನೂ ಸಾರ್ವತ್ರಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತದೆ. ಯಾವುದೇ ಪೂರ್ವ-ನೋಂದಣಿ ಇಲ್ಲದೆ ಎಲ್ಲಾ ವಯಸ್ಸಿನವರಿಗೆ ವಾಕ್-ಇನ್ ಲಸಿಕೆ ನೀಡುವುದು ಈ ಸಮಯದ ತುರ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.