ಬೆಳ್ಳಂದೂರಿನ ಶಾಲೆ ಆವರಣದಲ್ಲಿ ಭಾರೀ ಸ್ಫೋಟಕ ವಸ್ತುಗಳು ಪತ್ತೆ !

Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ (Rameshwaram Cafe Case) ನೆನಪು ಮಾಸುವ ಮುನ್ನವೇ ಜನರಲ್ಲಿ ಆತಂಕ ಸೃಷ್ಟಿಸುವ ಇನ್ನೊಂದು ಘಟನೆ ನಡೆದಿದೆ.ಬೆಂಗಳೂರಿನ (Bengaluru) ಬೆಳ್ಳಂದೂರು ಖಾಸಗಿ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಸ್ಫೋಟಕಗಳನ್ನು ಟ್ರಾಕ್ಟರ್ (Tractor) ಒಂದರಲ್ಲಿ ಇಡಲಾಗಿತ್ತು.

ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಬಹಳಷ್ಟು ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ. ಮಾರ್ಚ್ (March) ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಘಟನೆ ಬಗ್ಗೆ ಸಿಸಿಬಿ (CCB) ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಕೆಫೆಯಲ್ಲಿ ಬಾಂಬ್ ಇಟ್ಟು ಹೋಗಿದ್ದ ಉಗ್ರನನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ. ಇದೀಗ ಉಗ್ರರ ದೃಷ್ಟಿ ಶಾಲೆಯತ್ತ ಬಿದ್ದಿದೆಯೇ? ಎಂಬ ಆತಂಕ ಎದುರಾಗಿದೆ. ಇನ್ನು ಬೆಂಗಳೂರಿನ ಹಲವು ಶಾಲೆಗಳಿಗೆ (School) ಇತ್ತೀಚೆಗೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿತ್ತು. ನಂತರ ಅದು ನಕಲಿ ಬೆದರಿಕೆ ಎಂಬುದು ತಿಳಿದು ಬಂದಿದ್ದರೂ, ಬೆದರಿಕೆ ಸಂದೇಶದ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

ಅದಾದ ನಂತರ ಕೆಲವು ದಿನಗಳಲ್ಲಿ ತಮಿಳುನಾಡು (Tamilnadu) ಮತ್ತು ಇತರ ಕೆಲವು ರಾಜ್ಯಗಳ ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು. ಇಂಥ ಸಂದರ್ಭದಲ್ಲಿಯೆ ಬೆಂಗಳೂರಿನ ಶಾಲೆಯ ಆವರಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪರೀಕ್ಷೆ ಸಮಯವಾಗಿರುವುದರಿಂದ ಮಕ್ಕಳ ಜಾಗೃತೆಯ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದು ಪಾಲಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Exit mobile version