ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿರುವುದು ಸುಳ್ಳು ಎನ್ನುತ್ತಿದ್ದಾರೆ ಪ್ರತ್ಯಕ್ಷದರ್ಶಿಗಳು

ಕೋಲ್ಕತಾ, ಮಾ. 11: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿದೆ.

ಮಮತಾ ಬ್ಯಾನರ್ಜಿ ಅವರು ಸ್ಥಳೀಯರೊಂದಿಗೆ ಮಾತನಾಡುವಾಗ ದುಷ್ಕರ್ಮಿಗಳು ಅವರನ್ನು ತಳ್ಳಾಡಿದ್ದಾರೆ. ಇದರಿಂದ ಮಮತಾ ಅವರ ಕಾಲಿಗೆ ಪೆಟ್ಟಾಗಿದೆ ಎಂದು ಆರೋಪಿಸಲಾಗಿದೆ. ಮಮತಾ ಬ್ಯಾನರ್ಜಿ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಚುನಾವಣಾ ಪ್ರಚಾರದ ವೇಳೆ ನಾಲ್ಕೈದು ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದರಿಂದ ಎಡಗಾಲಿಗೆ ಪೆಟ್ಟಾಗಿದೆ ಎಂದು ಮಮತಾ ಹೇಳಿದ್ದಾರೆ. ಸಂಜೆ 6.15ರ ವೇಳೆಗೆ ಬಿರುಲಿಯಾದಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಡುವಾಗ ಈ ದಾಳಿ ನಡೆದಿದೆ ಎಂದಿದ್ದಾರೆ. ಆದರೆ, ಘಟನೆ ವೇಳೆ ಹಾಜರಿದ್ದ ಇಬ್ಬರು ಪ್ರತ್ಯಕ್ಷದರ್ಶಿಗಳು ಹೇಳುವುದೇ ಬೇರೆ. ಮಮತಾ ಬ್ಯಾನರ್ಜಿ ಅವರನ್ನು ಯಾರೂ ತಳ್ಳಾಡಿಲ್ಲ, ಹಲ್ಲೆ ನಡೆಸಿಲ್ಲ. ಸಣ್ಣದೊಂದು ಅಪಘಾತದಲ್ಲಿ ಗಾಯಗೊಂಡಿದ್ದಾರಷ್ಟೇ ಎಂದು ಅವರು ತಿಳಿಸಿದ್ದಾರೆ.


ಯಾರೂ ಮುಟ್ಟೇ ಇಲ್ಲ:

‘ಮುಖ್ಯಮಂತ್ರಿಯನ್ನು ನೋಡಲು ದೊಡ್ಡ ಗುಂಪು ಸೇರಿತ್ತು. ಅವರು ಹೊರಡುವಾಗ ಕೆಳಕ್ಕೆ ಬಿದ್ದು ಕುತ್ತಿಗೆ ಹಾಗೂ ಕಾಲಿಗೆ ಪೆಟ್ಟಾಯಿತು. ಆಕೆಯನ್ನು ಯಾರೂ ತಳ್ಳಿಲ್ಲ. ಆಕೆಯನ್ನು ನೋಡಲು ಜನರು ಸೇರಿದ್ದರಷ್ಟೇ. ಕಾರು ನಿಧಾನವಾಗಿ ಚಲಿಸುತ್ತಿತ್ತು’ ಎಂದು ವಿದ್ಯಾರ್ಥಿ ಸುಮನ್ ಮೈತಿ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಹೋರ್ಡಿಂಗ್ನಿಂದಾದ ಅಪಘಾತ:

‘ಅಲ್ಲಿ ಏನಾಯಿತು ಎಂಬುದನ್ನು ನಾನು ನೋಡಿದ್ದೇನೆ. ದೇವಸ್ಥಾನದಿಂದ ಬಂದ ಮಮತಾ, ಬಾಗಿಲು ತೆರೆದು ಕಾರ್‌ನಲ್ಲಿ ಕುಳಿತುಕೊಂಡಿದ್ದರು. ಕಾರ್‌ನ ಮುಂಭಾಗದಲ್ಲಿ ಅಳವಡಿಸಿದ್ದ ಹೋರ್ಡಿಂಗ್ ಬಾಗಿಲಿನ ಮೇಲೆ ಬಿದ್ದಿದೆ. ಅದು ಮಮತಾ ಅವರ ಕುತ್ತಿಗೆ ಮತ್ತು ಕಾಲಿಗೆ ತಾಗಿದೆ. ಆಕೆಗೆ ಯಾರೂ ಹೊಡೆದಿಲ್ಲ’ ಎಂದು ಚಿತ್ತರಂಜನ್ ಎಂಬುವವರು ತಿಳಿಸಿದ್ದಾರೆ.

ಇದೆಲ್ಲ ದೊಡ್ಡ ನಾಟಕ:

ಮಮತಾ ಅವರದ್ದು ಸಣ್ಣದೊಂದು ಅಪಘಾತ. ಅದನ್ನೇ ಅವರು ಪೂರ್ವ ನಿಯೋಜಿತ ಸಂಚು ಎಂಬಂತೆ ಬಿಂಬಿಸಿ ಗದ್ದಲವೆಬ್ಬಿಸಿದ್ದಾರೆ. ಆಕೆಯ ಸುತ್ತಲೂ 24 ಗಂಟೆ ಸಾಕಷ್ಟು ಮಂದಿ ಭದ್ರತಾ ಸಿಬ್ಬಂದಿ ಇರುತ್ತಾರೆ. ಹೀಗಿರುವಾಗ ಅವರನ್ನು ತಳ್ಳಾಡಲು ಸಾಧ್ಯವೇ? ಇದೆಲ್ಲ ದೊಡ್ಡ ನಾಟಕ ಎಂದು ಬಿಜೆಪಿ ಟೀಕಿಸಿದೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.