• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
0
SHARES
13
VIEWS
Share on FacebookShare on Twitter

ಬೆಂಗಳೂರು ಹೊರವಲಯದಲ್ಲಿ ನಕಲಿ ಕ್ಯಾನ್ಸರ್ (fake cancer drugs seized) ಔಷಧ ಜಾಲ ಪತ್ತೆ: ₹6 ಕೋಟಿ ಮೌಲ್ಯದ ಔಷಧ ವಶ

ಕ್ಯಾನ್ಸರ್ ರೋಗಿಗಳನ್ನೇ ಟಾರ್ಗೆಟ್ ಮಾಡಿದ್ದ ನಕಲಿ ಔಷಧ ಜಾಲ

ತಾವರೆಕೆರೆ ಫಾರ್ಮ್ಹೌಸ್ನಲ್ಲಿ ಅಕ್ರಮ ತಯಾರಿಕೆ; ಪ್ರಮುಖ ಆರೋಪಿ ಚೇತನ್ಗಾಗಿ ಪೊಲೀಸರ ಶೋಧ

Bengaluru : ಬೆಂಗಳೂರಿನ ಹೊರವಲಯದಲ್ಲಿ ಕ್ಯಾನ್ಸರ್ (Cancer) ಚಿಕಿತ್ಸೆಗೆ ಬಳಸುವ ದುಬಾರಿ (fake cancer drugs seized) ಔಷಧಗಳನ್ನು ನಕಲಿ ರೂಪದಲ್ಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬೃಹತ್ ಜಾಲವೊಂದನ್ನು ಪೊಲೀಸರು ಹಾಗೂ ಔಷಧ ಆಡಳಿತ ಅಧಿಕಾರಿಗಳು ಭೇದಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸರು ಮತ್ತು ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ತಾವರೆಕೆರೆ ಸಮೀಪದ ಸಿ.ಕೆ. ತಾಂಡ್ಯಾ ಗ್ರಾಮದ ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ನಕಲಿ ಔಷಧ ತಯಾರಿಕಾ ಘಟಕ ಪತ್ತೆಯಾಗಿದೆ.

fake cancer drugs seized

ಹೊರಗಿನಿಂದ ಸಾಮಾನ್ಯ ತೋಟದ ಮನೆಯಂತೆ ಕಾಣುತ್ತಿದ್ದ ಈ ಫಾರ್ಮ್ಹೌಸ್ನಲ್ಲೇ ದುಬಾರಿ (fake cancer drugs seized) ಕ್ಯಾನ್ಸರ್ ಔಷಧಗಳ ನಕಲಿ ತಯಾರಿಕೆ ಹಾಗೂ ಪ್ಯಾಕಿಂಗ್ (Packing) ನಡೆಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಫಾರ್ಮ್ಹೌಸ್ ಮೇಲೆ ದಾಳಿ ನಡೆಸಿದ ವೇಳೆ ಸುಮಾರು ₹6 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ವ್ಯಕ್ತಿಯೊಬ್ಬರಿಂದ ಫಾರ್ಮ್ಹೌಸ್ ಅನ್ನು ಲೀಸ್ಗೆ ಪಡೆದು ಈ ಅಕ್ರಮ ಚಟುವಟಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.

ಬೆಂಗಳೂರು ಮೂಲದ ಚೇತನ್ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ದಾಳಿ ವೇಳೆ ದೊರೆತ ಔಷಧಗಳು, ಪ್ಯಾಕಿಂಗ್ ಸಾಮಗ್ರಿಗಳು ಹಾಗೂ ಇತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ತನಿಖೆಯ ಪ್ರಕಾರ, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ದುಬಾರಿ ಔಷಧಗಳಿಗೆ ಪ್ರತಿಷ್ಠಿತ ಔಷಧ ಕಂಪನಿಗಳ ಹೆಸರಿನ ಲೇಬಲ್ಗಳನ್ನು ಅಂಟಿಸಿ ಅವುಗಳನ್ನು ನೈಜ ಉತ್ಪನ್ನಗಳಂತೆ ಮಾರುಕಟ್ಟೆಗೆ ಕಳುಹಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಸುಮಾರು ₹600 ಮೌಲ್ಯದ ಔಷಧವನ್ನು ₹6,000ದಿಂದ ₹8,000ದವರೆಗೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಮೂಲಕ ಆರೋಪಿಗಳು ಭಾರೀ ಪ್ರಮಾಣದ ಹಣ

ಸಂಪಾದಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಕಲಿ ಔಷಧಗಳನ್ನು ನೀಡುವುದು

ಅವರ ಆರೋಗ್ಯದ ಮೇಲೆ ಅತ್ಯಂತ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಚೇತನ್ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ನಕಲಿ ಔಷಧಗಳನ್ನು ಯಾವ ಪ್ರದೇಶಗಳಿಗೆ ಪೂರೈಕೆ ಮಾಡಲಾಗುತ್ತಿತ್ತು, ಅವುಗಳನ್ನು ಯಾರ ಮೂಲಕ ಮಾರುಕಟ್ಟೆಗೆ ಕಳುಹಿಸಲಾಗುತ್ತಿತ್ತು ಮತ್ತು ಈ ದಂಧೆಯಲ್ಲಿ ಇನ್ನೂ ಎಷ್ಟು

ಮಂದಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ನಕಲಿ ಔಷಧ ತಯಾರಿಕೆ ಹಾಗೂ ಮಾರಾಟದ ಹಿಂದೆ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆಯೇ

ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಔಷಧ ಆಡಳಿತ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ, ಆರೋಗ್ಯ ಇಲಾಖೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ಆರಂಭಿಸಿರುವ QR ಕೋಡ್ ವ್ಯವಸ್ಥೆಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹೋಟೆಲ್ಗಳು, ರೆಸ್ಟೋರೆಂಟ್ಗಳು, ಮೆಡಿಕಲ್ ಸ್ಟೋರ್ಗಳು ಹಾಗೂ ಆಸ್ಪತ್ರೆಗಳ ಮುಂಭಾಗ ಅಳವಡಿಸಲಾಗಿರುವ QR ಕೋಡ್ಗಳನ್ನು (QR Code) ಸ್ಕ್ಯಾನ್ ಮಾಡುವ

ಮೂಲಕ ಸಾರ್ವಜನಿಕರು ಆಹಾರ ಗುಣಮಟ್ಟ, ವೈದ್ಯಕೀಯ ಸೇವೆ ಮತ್ತು ಮೆಡಿಕಲ್ ಸ್ಟೋರ್ಗಳಲ್ಲಿನ ಸಮಸ್ಯೆಗಳ ಕುರಿತು ದೂರು ಸಲ್ಲಿಸಬಹುದಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸೋಮವಾರ ಈ ವ್ಯವಸ್ಥೆಯನ್ನು ಬಿಡುಗಡೆ ಮಾಡಿದ್ದರು. ವ್ಯವಸ್ಥೆ ಆರಂಭವಾದ ಕೇವಲ 24 ಗಂಟೆಗಳಲ್ಲೇ 504 ದೂರುಗಳು ದಾಖಲಾಗಿವೆ ಎನ್ನಲಾಗಿದೆ.

ನಕಲಿ ಔಷಧ ಹಾಗೂ ಕಳಪೆ ಆಹಾರದಂತಹ ಸಮಸ್ಯೆಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತ್ವರಿತವಾಗಿ ಗುರುತಿಸಿ ಕ್ರಮ ಕೈಗೊಳ್ಳಲು ಈ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಸಹಕಾರಿಯಾಗಲಿದೆ.

ಇದನ್ನು ಓದಿ : https://vijayatimes.com/crackdown-on-fake-pensions/

Tags: bengalurucancerfakemedicine

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.