ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಖೋಟಾ ನೋಟು(Fake Notes) ಚಲಾವಣೆ ಆರೋಪದ ಮೇಲೆ ಬಿಜೆಪಿ(BJP) ಸಾಮಾಜಿಕ ಜಾಲತಾಣ ಸದಸ್ಯ ಸೇರಿದಂತೆ ಮೂವರನ್ನು ಕುಂದಗೋಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ನೋಟುಗಳನ್ನು, ಎಂದರೆ ಸುಮಾರು 23,500 ರೂ. ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಹಾಲು(Milk) ಮಾರುವ ಸೋಗಿನಲ್ಲಿ ಖೋಟಾ ನೋಟು ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.

ಜಗತ್ತಿನ ಕಣ್ಣಿಗೆ ಇವರೆಲ್ಲಾ ಮಾಡುತ್ತಿದ್ದದ್ದು ಹಾಲಿನ ವ್ಯಾಪಾರ, ಆದರೆ ಒಳಗೆ ಮಾಡುತ್ತಿದ್ದದ್ದು ಮಾತ್ರ ಬೇರೆಯೇ ಕೆಲಸ. ಹೌದು, ಧಾರವಾಡದಲ್ಲಿ ನಕಲಿ ನೋಟು ಚಲಾವಣೆ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದಾರೆ. ಈ ಕೇಸ್ನಲ್ಲಿ ಬಂಧಿತನಾದ ವ್ಯಕ್ತಿಯ ಹಿನ್ನೆಲೆ ಕೇಳಿದರೆ ಇನ್ನೂ ಆಶ್ಚರ್ಯವಾಗುತ್ತದೆ. ಏಕೆಂದರೆ, ಈತ ಸ್ಥಳೀಯ ಬಿಜೆಪಿ ಮುಖಂಡ. ಸ್ಥಳೀಯರ ಪ್ರಕಾರ, ಈತ ಸೇರಿ ಉಳಿದ ಆರೋಪಿಗಳು ನಡೆಸ್ತಿದ್ದದ್ದು ಹಾಲಿನ ವ್ಯಾಪಾರ. ಆದರೆ ಒಳಗೊಳಗೆ ನಕಲಿ ನೋಟು ಚಲಾವಣೆ ಮಾಡುತ್ತಿದ್ದರು. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿದ್ದ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಕುಂದಗೋಳ, ಸುತ್ತಮುತ್ತ ಚಲಾವಣೆ ಮಾಡುತ್ತಿದ್ದ.

ಹಾಲಿನ ವ್ಯಾಪಾರದ ಜೊತೆ ಖೋಟಾ ನೋಟು ದಂಧೆ ಕೂಡ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಮುಖಂಡ ಸಾಗರ್ ಕಾಶಪ್ಪನವರ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ನಕಲಿ ನೋಟುಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ.
ಈ ಆರೋಪಿಗಳು ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಸರಬರಾಜು ಮಾಡುತ್ತಿದ್ದರು ಎನ್ನುವ ಖಚಿತ ಮಾಹಿತಿ ಮೇರೆಗೆ ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು,

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಾಗರ್ ಕಾಶಪ್ಪನವರ್ ಸೇರಿ ಮೂವರನ್ನು ಬಂಧಿಸಲಾಗಿದೆ. ಹಾಲಿನ ವ್ಯಾಪಾರದ ಜೊತೆ ಈ ದಂಧೆ ನಡೆಸುತ್ತಿದ್ದು, ಇದರ ಹಿಂದೆ ಮತ್ತಷ್ಟು ಜನರ ಕೈವಾಡ ಇರೋ ಶಂಕೆ ವ್ಯಕ್ತವಾಗಿದೆ. ಸದ್ಯ, ಮೂವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಪೊಲೀಸರು, ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Exit mobile version