Visit Channel

ಫ್ಯಾಂಟಸಿ’ ಚಿತ್ರದಲ್ಲಿ ಪ್ರಿಯಾಂಕಾ

priyanka

ಪ್ರಿಯಾಂಕಾ ಕಿರುತೆರೆಯಲ್ಲಿ ತಾರೆಯಾಗಿ ಗುರುತಿಸಿಕೊಂಡ ನಟಿ. `ಬಿಗ್ ಬಾಸ್’ ಸ್ಪರ್ಧೆಯಲ್ಲಿ ಪಾಲ್ಗೊಂಡ ಬಳಿಕವಂತೂ ಅವರಿಗೆ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಇದೀಗ ಫ್ಯಾಂಟಸಿ ಎನ್ನುವ ಹೆಸರಿನ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ತಿಳಿದು ಬಂದಿದೆ.

ಹೊಸಬರ ಹೊಸ ಹೊಸ ಆವಿಷ್ಕಾರಗಳು ಸ್ಯಾಂಡಲ್​ವುಡ್​ನಲ್ಲಿ ಸೃಷ್ಟಿಯಾಗುತ್ತಿವೆ. ಸಿನಿಮಾಗಳಿಗೆ ಫ್ಯಾಂಟಸಿ ಸ್ಪರ್ಶ ಕೊಡುವ ಕೆಲಸ ನಡೆಯುತ್ತಿದೆ. ಇದೀಗ ಅಂಥದ್ದೇ ಸೈಕಲಾಜಿಕಲ್​ ಥ್ರಿಲ್ಲರ್​ ಸಿನಿಮಾವೊಂದು ಚಂದನವನದಲ್ಲಿ ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಫ್ಯಾಂಟಸಿ’. ಪವನ್​ ಡ್ರೀಮ್​ ಫಿಲಂಸ್​ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ’ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಪವನ್ ಕುಮಾರ್ ಆರ್​. ಚಿತ್ರಕ್ಕೆ ನಿರ್ದೇಶಕರ ತಂದೆ ತಾಯಿಯವರಾದ ಎಂ. ಮಹಾದೇವಿ, ಟಿ. ರಂಗಸ್ವಾಮಿ ಸಹ- ನಿರ್ಮಾಪಕರಾಗಿದ್ದಾರೆ.

ಶೀರ್ಷಿಕೆಗೆ ತಕ್ಕಂತೆ ಭ್ರಮೆ ಮತ್ತು ವಾಸ್ತವದ ನಡುವೆ ಇಡೀ ಕಥೆ ತೆರೆದುಕೊಳ್ಳಲಿದೆ. ರೋಚಕ ಟ್ವಿಸ್ಟ್​ಗಳು ಕುತೂಹಲ ಮೂಡಿಸುತ್ತ ಸಾಗಲಿದೆ. ಸದ್ಯ ಸಂಕಲನದ ಕೆಲಸ ನಡೆಯುತ್ತಿದ್ದು, ಗುರುವಾರ ಪವನ್ ಡ್ರೀಮ್ ಫಿಲಂಸ್ ಯೂಟ್ಯೂಬ್ ಚಾನೆಲ್​ನಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಿದೆ.

ಕಿರುತೆರೆ ಮತ್ತು ಬಿಗ್​ಬಾಸ್ ಮೂಲಕ ಮನೆಮಾತಾಗಿರುವ ನಟಿ ಪ್ರಿಯಾಂಕಾ ಫ್ಯಾಂಟಸಿ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿರುವುದೇನೋ ನಿಜ. ಆದರೆ ನೆಗೆಟಿವ್​ ರೀತಿಯ ಪಾತ್ರ ಮಾಡಿದ್ದಾರೆ. ಇವರಲ್ಲದೆ ಕಿರುತೆರೆಯ ಬೇರೆ ರಿಯಾಲಿಟಿ ಶೋ ಸ್ಪರ್ಧಿಯೂ ಚಿತ್ರದ ಪ್ರಧಾನ ಪಾತ್ರದಲ್ಲಿದ್ದಾರೆ. `ಡ್ರಾಮಾ ಜ್ಯೂನಿಯರ್ಸ್’ ಸೀಸನ್​ 3ರಲ್ಲಿ ಅಂತಿಮ ಹಂತ ತಲುಪಿದ್ದ ಸ್ಪರ್ಧಿ ಅನುರಾಗ್​, ‘ಫ್ಯಾಂಟಸಿ’ ಸಿನಿಮಾದ ಕೇಂದ್ರ ಬಿಂದು. ಚಿತ್ರದಲ್ಲಿ ಆತನ ಮಾನಸಿಕ ಸ್ಥಿತಿಗತಿ ಹೇಗೆಲ್ಲ ಬದಲಾಗುತ್ತದೆ.

ಅದರಿಂದ ಎದುರಾಗುವ ಅನಾಹುತಗಳೇನು ಎನ್ನುವುದೇ ಚಿತ್ರದ ತಿರುಳು.ಮೈಸೂರು ಬಾಲ, ಹರಿಣಿ, ಗೋಲ್ಡನ್​ ಸ್ಟಾರ್​ ಗಣೇಶ್ ಅವರ ‘99’ ಚಿತ್ರದಲ್ಲಿ ಯಂಗರ್​ ಗಣೇಶ್​ ಪಾತ್ರ ಮಾಡಿದ್ದ ಹೇಮಂತ್​ ಮುಖ್ಯಭೂಮಿಕೆಯಲ್ಲಿದ್ದಾರೆ. ಇಡೀ ಸಿನಿಮಾ ಬೆಂಗಳೂರು ಸುತ್ತ ಮುತ್ತ 23 ದಿನಗಳ ಕಾಲ ಚಿತ್ರೀಕರಣವಾಗಿದ್ದು, ಮಡಿಕೇರಿಯಲ್ಲಿ 3 ದಿನ ಬೆಂಗಳೂರಿನಲ್ಲಿ ಒಂದು ದಿನದ ಚಿತ್ರೀಕರಣ ಬಾಕಿ ಇದೆ.

ನಿರ್ದೇಶಕ ಗುರು ದೇಶಪಾಂಡೆ ‘ಸಂಹಾರ’ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಚಂದನವನಕ್ಕೆ ಬಂದ ಪವನ್, ಬಳಿಕ ‘ಅಮ್ಮ ಐ ಲವ್​ ಯೂ’, ‘ಆದ್ಯಾ’ ಸಿನಿಮಾಗಳಲ್ಲಿ ನಿರ್ದೇಶಕ ಕೆ.ಎಂ. ಚೈತನ್ಯ ಅವರೊಂದಿಗೆ ಕೆಲಸ ಮಾಡಿದ್ದಾರೆ. ಒಂದರ್ಥದಲ್ಲಿ ಸಿನಿಮಾರಂಗಕ್ಕೆ ಬರುವುದಕ್ಕೆ ಚಿರು ಸರ್ಜಾ ಅವರೇ ಕಾರಣರಾದರೆ, ನಿರ್ದೇಶನದ ಪಾಠವನ್ನು ಚೈತನ್ಯ ಅವರಿಂದ ಕಲಿತಿದ್ದಾರೆ.
ತಾಂತ್ರಿಕ ವರ್ಗದಲ್ಲಿಯೂ ಸಿನಿಮಾಕ್ಕೆ ಕೆಲಸ ಮಾಡಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಆರ್ ಎಸ್​. ಗಣೇಶ್​ ನಾರಾಯಣ್​ ಮತ್ತು ಶಶಿರಾಮ್​ ಎಂಬುವವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.