• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಇಂದು ರೈತರಿಂದ ದಿಲ್ಲಿ ಚಲೋ ಪ್ರತಿಭಟನೆ: ಎಲ್ಲೆಲ್ಲೂ ಖಾಕಿ ಕಣ್ಗಾವಲು!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಇಂದು ರೈತರಿಂದ ದಿಲ್ಲಿ ಚಲೋ ಪ್ರತಿಭಟನೆ: ಎಲ್ಲೆಲ್ಲೂ ಖಾಕಿ ಕಣ್ಗಾವಲು!
0
SHARES
42
VIEWS
Share on FacebookShare on Twitter

Delhi: ರೈತರೇ ದೇಶದ ಬೆನ್ನೆಲಬು ಎಂಬುದು ಹೇಳಿಕೆಗೆ ಮಾತ್ರ ಸೀಮಿತವಾಗಬಾರದು (Farmer Protest Highlights) ಎನ್ನುತ್ತ ದೇಶದ ಅನ್ನದಾತರು ಇಂದು ಮತ್ತೆ ಕೇಂದ್ರ

ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿ ಚಲೋ  (Delhi Chalo) ಪ್ರತಿಭಟನೆಗೆ ದೇಶದ ನಾನಾ ರೈತ ಸಂಘಟನೆಗಳಿಗೆ ಕರೆ ನೀಡಲಾಗಿದ್ದು ವಿವಿಧ ಬೇಡಿಕೆಗಳ

ಈಡೇರಿಕೆಗೆ (Farmer Protest Highlights) ಒತ್ತಾಯಿಸಲಾಗಿದೆ.

Farmer Protest Highlights

ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ಅನ್ನದಾತರು ‘ದೆಹಲಿ ಚಲೋ’ಪ್ರತಿಭಟನೆ ಮಾಡಲು ರಾಷ್ಟ್ರ ರಾಜಧಾನಿಯತ್ತ ದಾಂಗುಡಿ ಇಟ್ಟಿದ್ದಾರೆ. ಪ್ರಧಾನಿ ನರೇಂದ್ರ

ಮೋದಿ (Narendra Modi) ನೇತೃತ್ವ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾನೂನು ಜಾರಿ ಸೇರಿ ಹಲವು ಬೇಡಿಕೆಗಳ

ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ (Kisan Morcha) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋಗೆ ಕರೆ ನೀಡಿವೆ. ಇದಕ್ಕೆ ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು

ಬೆಂಬಲ ಸೂಚಿಸಿದ್ದು, ಇಂದು ಲಕ್ಷಾಂತರ ರೈತರು ದೆಹಲಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆ ಸಿಂಘು, ಘಾಜಿಪುರ್, ಟಿಕ್ರಿ ಗಡಿಯಲ್ಲಿ ಸಂಚಾರ ನಿರ್ಬಂಧಿಸಿರುವ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಬೃಹತ್ ಗಾತ್ರದ ಬ್ಯಾರಿಕೇಡ್, ಕಾಂಕ್ರಿಟ್

(Barricade, Concrete) ಗೋಡೆ ನಿರ್ಮಿಸಿದ್ದಾರೆ. ರಸ್ತೆಯಲ್ಲಿ ಕಬ್ಬಿಣದ ಚೂಪಾದ ರಾಡ್‌ಗಳನ್ನು ಹಾಕಿದ್ದಾರೆ. ಇಂಟರ್‌ನೆಟ್ ಸ್ಥಗಿತಗೊಳಿಸಿ ದೆಹಲಿ ಸುತ್ತಲೂ ಪೊಲೀಸರು

ಸುತ್ತುವರೆದಿದ್ದಾರೆ.

Farmer Protest Highlights

ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ನ ಹಲವಾರು ರೈತ ಸಂಘಗಳು ತಮ್ಮ ಉತ್ಪನ್ನಗಳಿಗೆ ಎಂಎಸ್‌ಪಿಯನ್ನು (MSP) ಖಾತರಿಪಡಿಸುವ ಕಾನೂನನ್ನು ತರಲು ಒತ್ತಾಯಿಸಿ

ಮೆರವಣಿಗೆಗೆ ಕರೆ ನೀಡಿವೆ. ಸೋನಿಪತ್, ಪಾಣಿಪತ್, ಕರ್ನಾಲ್ ಕಡೆಗೆ ಹೋಗುವ ಬಸ್ಸುಗಳು ಈ ಮಾರ್ಗದ ಮೂಲಕ ಹಾದು ಹೋಗುತ್ತವೆ. ಹೀಗಾಗಿ ಈ ಮಾರ್ಗಗಳನ್ನು ಪೊಲೀಸರು

ಬಂದ್ ಮಾಡಿದ್ದು ಬ್ಯಾರಿಕೇಡ್ ಮೂಲಕ ಭದ್ರಕೋಟೆ ನಿರ್ಮಿಸಿದ್ದಾರೆ.

ದೆಹಲಿಯಲ್ಲಿ (Delhi) ಪೊಲೀಸರು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು. ಒಂದುವೇಳೆ ರೈತರು ಉದ್ವಿಗ್ನಗೊಂಡ್ರೆ, ನಿಯಂತ್ರಣಕ್ಕಾಗಿ ಹರಿಯಾಣ ಗಡಿಯಲ್ಲಿ ತಾತ್ಕಾಲಿಕವಾಗಿ 2

ಜೈಲುಗಳನ್ನೇ (Jail) ನಿರ್ಮಿಸಲಾಗಿದೆ. ಆ್ಯಂಬುಲೆನ್ಸ್​ಗಳಿಗೆ ಪರ್ಯಾಯ ಮಾರ್ಗಗಳನ್ನ ಸೂಚಿಸಲಾಗಿದೆ. ಹೋರಾಟದಲ್ಲಿ ಆಸ್ತಿ-ಪಾಸ್ತಿ ಹಾನಿಯಾದ್ರೆ ಹೋರಾಟಗಾರರೇ ಕಟ್ಟಬೇಕು

ಎಂದು ಹರಿಯಾಣ (Haryana) ಸರ್ಕಾರ ಎಚ್ಚರಿಸಿದೆ.

Tags: DelhiDelhi Chalofarmer protestpolice

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.