ಬೆಳಗಾವಿ ಡಿ 13 : ರಾಜ್ಯದಲ್ಲಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ಆದಷ್ಟು ಬೇಗ ಹಿಂಪಡೆಯಬೇಕೆಂದು ಆಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ತಂಡವು ಸುವರ್ಣಸೌಧ ಮುತ್ತಿಗೆಗೆ ಯತ್ನಿಸಿದರು
ನಗರದಲ್ಲಿಂದು ಹಿರೇಬಾಗೇವಾಡಿ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ರೈತರು ಸುವರ್ಣಸೌಧದವರೆಗೆ ಪಾದಯಾತ್ರೆಗೆ ಯತ್ನಿಸಿದ ವೇಳೆ ರೈತ ನಾಯಕರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು
ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದವೂ ನಡೆಯಿತು.ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರ್ಕಾರವೂ ತ್ವರಿತಗತಿಯಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.